ವಿನಯ್ ಕುಲಕರ್ಣಿ 
ರಾಜ್ಯ

ಅಪಘಾತಕ್ಕೀಡಾದ ಪುತ್ರನಿಗೆ ಶಸ್ತ್ರಚಿಕಿತ್ಸೆ: ಶಾಸಕ ವಿನಯ್‌ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು!

ತಮ್ಮ ಮಗ ಹೇಮಂತ್ ಗೆ ಅಪಘಾತವಾಗಿದ್ದರಿಂದ ಆತನ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿದ್ದು ತಮಗೆ ಜಾಮೀನು ನೀಡಬೇಕು ಎಂದು ಕೋರಿ ಶಾಸಕ ವಿನಯ್ ಅವರು ಮರಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ತಮ್ಮ ಮಗ ಹೇಮಂತ್ ಗೆ ಅಪಘಾತವಾಗಿದ್ದರಿಂದ ಆತನ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿದ್ದು ತಮಗೆ ಜಾಮೀನು ನೀಡಬೇಕು ಎಂದು ಕೋರಿ ಶಾಸಕ ವಿನಯ್ ಅವರು ಮರಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೇವಲ ಎರಡು ದಿನಗಳವರೆಗೆ ಮಾತ್ರ ಜಾಮೀನು ಮಂಜೂರು ಮಾಡಿದೆ. ಮರಳಿ ವಿನಯ್ ಕುಲಕರ್ಣಿ ಅವರು ಸೆ.11ರ ಸಂಜೆ 5ಕ್ಕೆ ಸಿಬಿಐ ಅಧಿಕಾರಿಗಳ ಎದುರು ಹಾಜರಾಗಿ ಮರಳಿ ಜೈಲು ಸೇರಬೇಕಿದೆ.

ಸದ್ಯ ಎರಡು ದಿನಗಳ ಕಾಲ ಜಾಮೀನು ಸಿಕ್ಕಿರುವ ವಿನಯ್ ಕುಲಕರ್ಣಿ ಅವರನ್ನು ಮಂಗಳವಾರ ಸಂಜೆಯೇ ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿನಯ್ ಕುಲಕರ್ಣಿ ಅವರ ಪುತ್ರ ಹೇಮಂತ್ ಅವರ ಕಾಲಿನ ಶಸ್ತ್ರ ಚಿಕಿತ್ಸೆ ಬೆಂಗಳೂರಿನಲ್ಲೇ ನಡೆಯುವುದರಿಂದ ವಿನಯ್ ಅವರು ಬೆಂಗಳೂರಿನಲ್ಲೇ ಉಳಿಯಬೇಕಾಗಿದೆ.

ಜಾಮೀನು ಸಿಕ್ಕಿರುವ ಈ ಎರಡು ದಿನಗಳ ಅವಧಿಯಲ್ಲಿ ಯಾವುದೇ ಸಭೆ ಮಾಡುವಂತಿಲ್ಲ ಎಂದು ಶಾಸಕ ವಿನಯ್‌ಗೆ ನ್ಯಾಯಾಲಯ ಸೂಚನೆ ನೀಡಿದೆ

ಈ ಹಿಂದೆ ಸಿಬಿಐನಿಂದ ಬಂಧಿತರಾಗಿ ಸೆರೆವಾಸ ಅನುಭವಿಸಿದ್ದ ವಿನಯ್ ಕುಲಕರ್ಣಿ, ಜಾಮೀನಿನ ಮೇಲೆ ಹೊರ ಬಂದು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಆದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಲಯ ಇವರ ಜಾಮೀನು ರದ್ದು ಮಾಡಿದ್ದರಿಂದ ಮರಳಿ ಅವರು ಪರಪ್ಪನ ಅಗ್ರಹಾರ ಸೇರಬೇಕಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video

ನೇಪಾಳ ಬಳಿಕ ಈಗ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಫ್ರಾನ್ಸ್ ಪ್ರಧಾನಿ!

ನೇಪಾಳದ ದಂಗೆ - ಇದು ಭಾರತ ಸ್ನೇಹಿ, ಚೀನಾ ವಿರೋಧಿ ಅಂದುಕೊಳ್ಳುವ ಮುಂಚೆ ಗಮನಿಸಬೇಕಾದ ಆಯಾಮಗಳು! (ತೆರೆದ ಕಿಟಕಿ)

'ಕಣ್ಣೀರಿನೊಂದಿಗೆ ಡ್ಯಾನ್ಸ್ ಮಾಡಲು ಸಾಧ್ಯವಿಲ್ಲ': ಪ್ರಧಾನಿ ಮೋದಿ ಸ್ವಾಗತಕ್ಕೆ ಕುಕಿ ಸಮುದಾಯ ವಿರೋಧ

'ನೇಪಾಳ ಪರಿಸ್ಥಿತಿ ನೋಡಿ': AAP ಶಾಸಕ ಮೆಹ್ರಾಜ್ ಮಲಿಕ್ ವಿರುದ್ಧ FIR ದಾಖಲಿಸಿದ್ದಕ್ಕೆ ಮುಫ್ತಿ ಆಕ್ರೋಶ, ಸರ್ಕಾರಕ್ಕೆ ಎಚ್ಚರಿಕೆ!

SCROLL FOR NEXT