ಬಾನು ಮುಷ್ತಾಕ್  
ರಾಜ್ಯ

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ: ಹೈಕೋರ್ಟ್ ನಲ್ಲಿ ಮತ್ತೆ ಎರಡು PIL ಸಲ್ಲಿಕೆ

ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು ಅವರು ಕನ್ನಡಾಂಬೆ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಇನ್ನು ವಾರವಷ್ಟೇ ಬಾಕಿ ಉಳಿದಿದ್ದು, ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಈಗಾಗಲೇ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.

ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು ಅವರು ಕನ್ನಡಾಂಬೆ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್‌ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು.

ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಹಿಂದೂ ಆಗಮಿಕ ಪದ್ಧತಿ ಪ್ರಕಾರವೇ ಕಟ್ಟುನಿಟ್ಟಾಗಿ ದಸರಾ ಉದ್ಘಾಟನೆ ನೆರವೇರಿಸಲು ನಿರ್ದೇಶನ ನೀಡಬೇಕು ಎಂದು ಬೆಂಗಳೂರಿನ ನಿವಾಸಿ ಎಚ್‌.ಎಸ್‌.ಗೌರವ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ಹಿಂದೂ ಸಂಘಟನೆಗಳು ಚಾಮುಂಡಿ ಚಲೋ ನಡೆಸಿದ್ದವು. ಮತ್ತೊಂದೆಡೆ, ದಲಿತ ಸಂಘಟನೆಗಳು ಬಾನು ಮುಷ್ತಾಕ್ ಬೆಂಬಲಿಸಿ ಹೋರಾಟ ಮಾಡಿದ್ದವು. ಇದೀಗ ಕಾನೂನು ಹೋರಾಟ ಮುಂದುವರಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪ್ರಮಾಣ ವಚನ: ರಾಜೀನಾಮೆ ನಂತರ ಮೊದಲ ಬಾರಿಗೆ ಕಾಣಿಸಿಕೊಂಡ ಧನಕರ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಕೇಸ್: ಸ್ಥಳ ಮಹಜರು ಸಮಯದಲ್ಲಿ ಹಲವು ಅಸ್ಥಿಪಂಜರಗಳ ನೋಡಿದ್ದೇನೆಂದ ಸೌಜನ್ಯಾ ಮಾವ..!

ಕುಮಾರ ಕೃಪಾ ಅತಿಥಿ ಗೃಹ ಹೆಸರಿನಲ್ಲಿ ನಕಲಿ ವೆಬ್‌ಸೈಟ್: FIR ದಾಖಲು

ಪಾಕ್ ಜಿಂದಾಬಾದ್ ಕೂಗುವವರ ವಿರುದ್ಧ ಕ್ರಮವಿಲ್ಲ: ಸಿ ಟಿ. ರವಿ ವಿರುದ್ಧ ಮಾತ್ರ FIR; ವಿದ್ರೋಹಿಗಳಿಗೆ ಸರ್ಕಾರದ ಕುಮ್ಮಕ್ಕು ಸಾಬೀತು..!

ಮಗಳ ಕಾಲೇಜು ಶುಲ್ಕ ಭರಿಸಲು ಹಣದ ಸಮಸ್ಯೆ: ಮಂಗಳಸೂತ್ರ ಒತ್ತೆಯಿಟ್ಟ ತಾಯಿ

SCROLL FOR NEXT