ವಿಷ್ಣುವರ್ಧನ್, ಸರೋಜಾದೇವಿ 
ರಾಜ್ಯ

ಸಾಹಸಸಿಂಹ ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಣೆ

ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ.

ಬೆಂಗಳೂರು: ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ.

ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದಿನ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಇನ್ನು ಪ್ರಶಸ್ತಿಯನ್ನು ಯಾವಾಗ, ಎಲ್ಲಿ ಪ್ರದಾನ ಮಾಡಬೇಕೆಂದು ಮುಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಲಿದೆ. ಇಂದಿನ ಸಂಪುಟ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಕಳುಹಿಸಲು ನಿರ್ಣಯ ಅಂಗೀಕರಿಸಲಾಯಿತು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಮನವಿ ಮಾಡಿಕೊಂಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು.

1972ರಲ್ಲಿ ವಂಶವೃಕ್ಷ ಚಿತ್ರದಲ್ಲಿ ನಟಿಸಿದ್ದ ವಿಷ್ಣುವರ್ಧನ್ ಅವರು ಅದೇ ವರ್ಷ ಬಿಡುಗಡೆಯಾಗಿದ್ದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ನಾಗರಹಾವು' ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟನಾಗಿ ಕಾಣಿಸಿಕೊಂಡರು. ಈ ಚಿತ್ರ ಬ್ಲಾಕ್ ಬಸ್ಟರ್ ಚಿತ್ರವಾಗಿದ್ದು ಮೊದಲ ಪ್ರಯತ್ನದಲ್ಲೇ ವಿಷ್ಣುವರ್ಧನ್ ದೊಡ್ಡ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡರು. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು 220 ಸಿನಿಮಾಗಳಲ್ಲಿ ವಿಷ್ಣುವರ್ಧನ್ ನಟಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯವು 2005ರಲ್ಲಿ ವಿಷ್ಣುವರ್ಧನ್ ಅವರಿಗೆ ಗೌರವ ಡಾಕ್ಟರೇಟ್ ಕೊಟ್ಟು ಗೌರವಿಸಿತ್ತು.

ದಿವಂಗತ ಸರೋಜಾದೇವಿ ಹಿನ್ನಲೆ

ಕನ್ನಡದ ಹಿರಿಯ ಚಲನಚಿತ್ರ ನಟಿಯರಲ್ಲಿ ಬಿ. ಸರೋಜಾದೇವಿ ಸಹ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿಯಾಗಿ ಗುರುತಿಸಿಕೊಂಡರು. ಅವರು ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ 'ಅಭಿನಯ ಸರಸ್ವತಿ' ಮತ್ತು ತಮಿಳಿನಲ್ಲಿ 'ಕನ್ನಡತು ಪೈಂಗಿಲಿ' (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ.

ಸರೋಜಾದೇವಿ ಅವರು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾರತದ 60ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತ ಸರ್ಕಾರ 2008ರ ಜೀವಮಾನ ಸಾಧನೆ ಪ್ರಶಸ್ತಿ ನೀಡಿತ್ತು. ಇನ್ನು 1992ರಲ್ಲಿ 'ಪದ್ಮಭೂಷಣ ಪ್ರಶಸ್ತಿ' ಮತ್ತು 1969ರಲ್ಲಿ ಪದ್ಮಶ್ರೀ ಪಡೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!

Asia Cup Rising Stars T20: ಓಮನ್ ತಂಡವನ್ನು ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ

ಶಬರಿಮಲೆಯಲ್ಲಿ ಜನದಟ್ಟಣೆ: ಎರಡು ದಿನದಲ್ಲಿ 2 ಲಕ್ಷ ಅಯ್ಯಪ್ಪ ಭಕ್ತರ ಭೇಟಿ; ಮಹಿಳಾ ಭಕ್ತೆ ಸಾವು!

ಬಾಬಾ ಸಿದ್ದಿಕಿ ಕೊಲೆ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಿಂದ ಗಡೀಪಾರು!

POCSO case: ಯಡಿಯೂರಪ್ಪಗೆ ಸಂಕಷ್ಟ; ಡಿಸೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

SCROLL FOR NEXT