ಸಿಎಂ ಸಿದ್ದರಾಮಯ್ಯ 
ರಾಜ್ಯ

ಸ್ಲಂ ಬೋರ್ಡ್ ಅಡಿ 42,000 ಮನೆಗಳ ನಿರ್ಮಾಣ, ಮೂಲಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಅನುದಾನ: ಸಿಎಂ

ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯು ರಾಜ್ಯಾದ್ಯಂತ 42,000 ಮನೆಗಳನ್ನು ನಿರ್ಮಿಸುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಅನುದಾನ ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಬುಧವಾರ ವಸತಿ ಇಲಾಖೆಯೊಂದಿಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ. ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ ಎಂದು ಹೇಳಿದರು.

ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ. ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; 3,500 ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ; ಬಿಜೆಪಿ ಬೆಂಬಲ; Video

ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ: ಹೊಟ್ಟೆಗೆ ಒದ್ದು ಭ್ರೂಣ ಹೊರತೆಗೆದು ಬಾಲಕನಿಂದ ಭೀಕರ ಕೃತ್ಯ!

ಬದುಕುಳಿದ ನಾನು ಅದೃಷ್ಟಶಾಲಿ, ಆದರೆ ಪ್ರತಿದಿನವೂ ನೋವು: PTSD ಸಮಸ್ಯೆಯಿಂದ ಬಳಲುತ್ತಿರುವ ಏರ್ ಇಂಡಿಯಾ ಅಪಘಾತದ ಸಂತ್ರಸ್ತ ವಿಶ್ವಾಸ್ ಕುಮಾರ್

ಹಿಂದುಜಾ ಗ್ರೂಪ್ ಅಧ್ಯಕ್ಷ ಗೋಪಿಚಂದ್ ಹಿಂದುಜಾ ನಿಧನ

INDIA bloc ಅಧಿಕಾರಕ್ಕೆ ಬಂದರೆ ಬಿಹಾರ ರೈತರಿಗೆ ಬಂಪರ್ ಕೊಡುಗೆ: ತೇಜಸ್ವಿ ಯಾದವ್

SCROLL FOR NEXT