ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ 
ರಾಜ್ಯ

ಮದ್ದೂರು ಗಣೇಶ ಮೆರವಣಿಗೆ ಕಲ್ಲು ತೂರಾಟ ಕೇಸ್: ASP ತಿಮ್ಮಯ್ಯ ವರ್ಗಾವಣೆ

ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮಂಡ್ಯ: ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಗೃಹ ಇಲಾಖೆ ವರ್ಗಾವಣೆ ಮಾಡಿ ಇನ್ನೂ ತಿಮ್ಮಯ್ಯ ಅವರಿಗೆ ಜಾಗ ತೋರಿಸಿಲ್ಲ. ನವೀನ್ ಕುಮಾರ್ ಅವರು ತಕ್ಷಣವೇ ಮಂಡ್ಯ ಜಿಲ್ಲೆಯ ಹೆಚ್ಚುವರಿ ಎಸ್‌ಪಿ-1 ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಮದ್ದೂರು ಪ್ರಕರಣದಲ್ಲಿ ತಿಮ್ಮಯ್ಯಗೆ ಹೆಚ್ಚುವರಿ ಜವಾಬ್ದಾರಿ ನೀಡಿಯೇ ಇರಲಿಲ್ಲ. ಹೀಗಿದ್ದರೂ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಲ್ಲು ತೂರಾಟ ತಡೆಯಬೇಕಿದ್ದು ಮದ್ದೂರು ಇನ್‌ಸ್ಪೆಕ್ಟರ್‌ ಹಾಗೂ ಇತರ ಪೊಲೀಸರ ಕರ್ತವ್ಯವಾಗಿತ್ತು. ಸೋಮವಾರ ಪ್ರತಿಭಟನೆ ಬಂದೋಬಸ್ತ್ ನೇತೃತ್ವ ವಹಿಸಿದ್ದು ಎಸ್ಪಿ. ಹೀಗಿದ್ದರೂ ಸಹ ಅಮಾಯಕ ಅಧಿಕಾರಿಯನ್ನು ಸರ್ಕಾರ ಬಲಿಪಶು ಮಾಡಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಲಕ್ಷ್ಮಿ ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

SCROLL FOR NEXT