ಸಿದ್ದರಾಮಯ್ಯ ನಿವಾಸದ ಬಳಿ ಹೊತ್ತಿ ಉರಿದ ಕಾರು 
ರಾಜ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಹೊತ್ತಿ ಉರಿದ ಕಾರು!

ಇಂದು ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್‌ ಎಂಜಿನಿಯರ್‌ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ' ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ.

ಇಂದು ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್‌ ಎಂಜಿನಿಯರ್‌ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಾಫ್ಟ್ ವೇರ್‌ ಎಂಜಿನಿಯರ್‌ ಸಚಿನ್‌ ಎಂಬುವವರು ಕಾರಿನಲ್ಲಿ ಕೋರಮಂಗಲದಿಂದ ಗಂಗಾನಗರದಲ್ಲಿರುವ ಸಬ್‌ರಿಜಿಸ್ಟ್ರರ್‌ ಕಚೇರಿಗೆ ಆಸ್ತಿ ನೋಂದಣಿಗಾಗಿ ತೆರಳುತ್ತಿದ್ದರು. ಸಿಎಂ ಮನೆ ಸಮೀಪದ ಅರಮನೆ ರಸ್ತೆಯ ವಿಲ್ಸನ್‌ ಮ್ಯಾನರ್‌ ಸೇತುವೆಯ ಸರ್ವೀಸ್‌ ರಸ್ತೆಯಲ್ಲಿ ಕಾರಿನ ಮುಂಭಾಗದ ಎಂಜಿನ್‌ನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದೆ.

ತಕ್ಷಣ ಚಾಲಕ ಅಪಾಯ ಅರಿತು ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಸಚಿನ್‌ ಹಾಗೂ ಚಾಲಕ ಇಬ್ಬರೂ ಕಾರಿನಿಂದ ಇಳಿದಿದ್ದಾರೆ. ಚಾಲಕ ಕಾರಿನ ಮುಂದಿನ ಬಾನೆಟ್‌ ತೆಗೆಯುತ್ತಿದ್ದಂತೆಯೇ ಬೆಂಕಿ ಆವರಿಸಿದ್ದರಿಂದ ಅವರು ಹಿಂದೆ ಸರಿದಿದ್ದಾರೆ. ಸಚಿನ್‌ ಅವರು ಎಚ್ಚೆತ್ತುಕೊಂಡು ಕಾರಿನಲ್ಲಿದ್ದ ದಾಖಲೆ ಮತ್ತು ಕೆಲ ವಸ್ತುಗಳನ್ನು ಹೊರಗೆ ತೆಗೆದುಕೊಂಡಿದ್ದಾರೆ.

ನೋಡ ನೋಡುತ್ತಿದ್ದಂತೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಕಾರಿನ ಟೈರ್ ಮತ್ತು ಡೀಸೆಲ್ ಟ್ಯಾಂಕ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಸಿಎಂ ನಿವಾಸದ ಸಮೀಪ ನಡೆದ ಈ ಘಟನೆ ತೀವ್ರ ಆತಂಕಕ್ಕೆ ಕಾರಣವಾಯಿತು.

ಹೈಗ್ರೌಂಡ್ಸ್ ಠಾಣೆ ಪೊಲೀಸರು ಸುಟ್ಟು ಹೋದ ಕಾರನ್ನು ಅಲ್ಲಿಂದ ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ನಿರ್ಗಮಿಸಿದ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌, ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

Delhi Red Fort blast- UAPA ಕೇಸು ದಾಖಲು, ಇಬ್ಬರ ಬಂಧನ, ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ

ದೆಹಲಿ ಸ್ಫೋಟ: ಕಾರಿನ ಮಾಲೀಕನಿಗೆ ಫರಿದಾಬಾದ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ?

Delhi Red Fort Blast: ಸ್ಥಳಕ್ಕೆ NIA-NSG ಭೇಟಿ; ಸಮಗ್ರ ತನಿಖೆ ಆರಂಭ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾ

'ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ, ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ': ಇಶಾ ಡಿಯೋಲ್

SCROLL FOR NEXT