ಸಂಗ್ರಹ ಚಿತ್ರ 
ರಾಜ್ಯ

ಕುಮಾರ ಕೃಪಾ ಅತಿಥಿ ಗೃಹ ಹೆಸರಿನಲ್ಲಿ ನಕಲಿ ವೆಬ್‌ಸೈಟ್: FIR ದಾಖಲು

ಸರ್ಕಾರಿ ಅತಿಥಿ ಗೃಹದ ವ್ಯವಸ್ಥಾಪಕ ಅವಿನಾಶ್ ಎಸ್ ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಅತಿಥಿ ಗೃಹವಾದ ಕುಮಾರ ಕೃಪಾ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ರಚಿಸಿದ ಆರೋಪದ ಮೇಲೆ ಹೈಗ್ರೌಂಡ್ಸ್ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸರ್ಕಾರಿ ಅತಿಥಿ ಗೃಹದ ವ್ಯವಸ್ಥಾಪಕ ಅವಿನಾಶ್ ಎಸ್ ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಕಿಡಿಗೇಡಿಗಳು https://kumarakrupaaguesthouse.com ಎಂಬ ನಕಲಿ ವೆಬ್'ಸೈಟ್ ರಚಿಸಿದ್ದು, ಕೊಠಡಿ ಬುಕಿಂಗ್ನೀಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಹಾಗೂ ವೈಯಕ್ತಿಕ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಈ ಮೂಲಕ ವಂಚನೆ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಆನ್‌ಲೈನ್‌ನಲ್ಲಿ ಕೊಠಡಿಗಳನ್ನು ಬುಕ್ ಮಾಡಿರುವುದಾಗಿ ಹೇಳಿಕೊಂಡು ಹಲವಾರು ಜನರು ಅತಿಥಿ ಗೃಹವನ್ನು ಸಂಪರ್ಕಿಸಿದ್ದು, ನಂತರವೇ ನಕಲಿ ವೆಬ್ ಸೈಟ್ ಕುರಿತು ಮಾಹಿತಿ ತಿಳಿದುಬಂದಿತ್ತು.

ಪಂಜಾಬ್‌ನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ನಕಲಿ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಫೋನ್ ಸಂಖ್ಯೆಗೆ ಹಣವನ್ನು ವರ್ಗಾಯಿಸಿದ್ದು. ಇದರಿಂದ 12,000 ರೂ.ಗಳನ್ನು ಕಳೆದುಕೊಂಡಿದ್ದಾರೆ. ಕರ್ನಾಟಕ ಅಪರಾಧ ತನಿಖಾ ಇಲಾಖೆಯಲ್ಲಿ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಯೊಬ್ಬರು ಈ ಸಂಖ್ಯೆಯನ್ನು ನ್ಯಾಯಾಧೀಶರಿಗೆ ನೀಡಿದ್ದಾರೆಂದು ತಿಳಿದುಬಂದಿದೆ. ಇದೀಗ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರ ನಿರ್ಧಾರ, ಸೆ.22ರಿಂದ ಸರ್ವೇ ಆರಂಭ: ಸಿಎಂ ಸಿದ್ದರಾಮಯ್ಯ

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪ್ರಮಾಣ ವಚನ: ರಾಜೀನಾಮೆ ನಂತರ ಮೊದಲ ಬಾರಿಗೆ ಕಾಣಿಸಿಕೊಂಡ ಧನಕರ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಕೇಸ್: ಸ್ಥಳ ಮಹಜರು ಸಮಯದಲ್ಲಿ ಹಲವು ಅಸ್ಥಿಪಂಜರಗಳ ನೋಡಿದ್ದೇನೆಂದ ಸೌಜನ್ಯಾ ಮಾವ..!

ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ

BRS ದೇಶದ ಅತ್ಯಂತ ಶ್ರೀಮಂತ ಪ್ರಾದೇಶಿಕ ಪಕ್ಷ; ನಾಲ್ಕನೇ ಸ್ಥಾನದಲ್ಲಿ TDP

SCROLL FOR NEXT