ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾಟನ್‌ಪೇಟೆಯಲ್ಲಿ ಗೂಡ್ಸ್ ವಾಹನ ಹರಿದು ಮಹಿಳೆ ಸಾವು

ಈ ಸಂಬಂಧ ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಕು ಸಾಗಣೆ ವಾಹನದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಕಾಟನ್‌ಪೇಟೆ ಪ್ರದೇಶದಲ್ಲಿ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಾಟನ್‌ಪೇಟೆ ನಿವಾಸಿ ಅಂಜದೇವಿ ಅವರು ಶುಕ್ರವಾರ ಸಂಜೆ 5.30 ರ ಸುಮಾರಿಗೆ ಬೆಂಗಳೂರಿನ ಕಾಟನ್‌ಪೇಟೆಯ ಮಿಲ್ ರಸ್ತೆಯಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಸರಕು ಸಾಗಣೆ ವಾಹನವೊಂದು ಅವರ ಮೇಲೆ ಹರಿದಿದೆ.

ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಜೊತೆಗಿದ್ದ ಮತ್ತೊಬ್ಬ ಮಹಿಳೆ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶವಾಗಿ ಪಾರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸರಕು ಸಾಗಣೆ ವಾಹನ ಮಹಿಳೆ ಮೇಲೆ ಹರಿದ ನಂತರ ಇತರ ಏಳು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ನಾಲ್ಕು ಬೈಕ್‌ಗಳು ಮತ್ತು ಮೂರು ಕಾರುಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಕು ಸಾಗಣೆ ವಾಹನದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!