ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

Hassan Tragedy: ನನ್ನಮ್ಮ ಹುಟ್ಟಿದೂರು, ನೋವಾಯ್ತು ಅದಕ್ಕೆ ಬಂದೆ; ಗಾಯಾಳುಗಳ ವಿಚಾರಿಸಿದ ದೇವೇಗೌಡ, ತಲಾ 1 ಲಕ್ಷ ರೂ ಪರಿಹಾರ!

ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಸದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದ ಈ ದುರಂತ ಮನಸ್ಸು ಕದಡುವಂತೆ ಮಾಡಿದೆ.

ಹಾಸನ: ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಸದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದ ಈ ದುರಂತ ಮನಸ್ಸು ಕದಡುವಂತೆ ಮಾಡಿದೆ. ಇನ್ನು ಘಟನಾ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ತೆರಳಿದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ನನ್ನಮ್ಮು ಹುಟ್ಟಿದ ಊರು ಇದು. ಮನಸ್ಸು ತಡಿಯಲಿಲ್ಲ. ಅದಕ್ಕಾಗಿ ಬಂದೆ ಎಂದು ಹೇಳಿದ್ದಾರೆ. ಇನ್ನು ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ದೇವೇಗೌಡ ಘೋಷಣೆ ಮಾಡಿದರು.

ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ ರೂ., ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 20 ಸಾವಿರ ರೂ., ಚಿಕ್ಕಪುಟ್ಟ ಗಾಯಗೊಂಡವರಿಗೆ ತಲಾ 15 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು. ಸರ್ಕಾರ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ ದೇವೇಗೌಡ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಾತಿ ರಹಿತ ಸಮಾಜ ನಿರ್ಮಾಣವೇ ಸಂವಿಧಾನದ ಆಶಯ: ಸಿಎಂ ಸಿದ್ದರಾಮಯ್ಯ

ಸಂಚಾರ ದಂಡ ರಿಯಾಯಿತಿಯಿಂದ ಬರೋಬ್ಬರಿ 106 ಕೋಟಿ ಸಂಗ್ರಹ: 37.86 ಲಕ್ಷ ಪ್ರಕರಣ ಇತ್ಯರ್ಥ

AI ವೀಡಿಯೊ ಮೂಲಕ ಪ್ರಧಾನಿ ಮೋದಿ ಮತ್ತು ಅವರ ದಿವಂಗತ ತಾಯಿಯ ತೇಜೋವಧೆ: Congress, ಐಟಿ ಸೆಲ್ ವಿರುದ್ಧ ಎಫ್ಐಆರ್

ಯಾರೂ ಭಾರತ-ಪಾಕ್ ಪಂದ್ಯ ನೋಡಬೇಡಿ, TV ಆಫ್ ಮಾಡಿ: ಪಹಲ್ಗಾಮ್ ಬಲಿಪಶು ಶುಭಂ ದ್ವಿವೇದಿ ಪತ್ನಿ ಕರೆ

ರಜನಿಕಾಂತ್ 'Coolie' ಚಿತ್ರದಲ್ಲಿ ನಟಿಸಿದ್ದು ನನ್ನ ದೊಡ್ಡ ತಪ್ಪು ನಿರ್ಧಾರ: Aamir Khan ಹೇಳಿಕೆ ಕುರಿತು ಸ್ಪಷ್ಟನೆ!

SCROLL FOR NEXT