ಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಣೆ 
ರಾಜ್ಯ

ಆಲಮಟ್ಟಿ ಎತ್ತರ ‌ಹೆಚ್ಚಳ ನಮ್ಮ ಹಕ್ಕು; ಬಿಜೆಪಿಯವರದ್ದು ಬರೀ ಬುಟ್ಟಿ ಬೇವಿನ ಸೊಪ್ಪು: ಸಂಸದರ ಬಗ್ಗೆ ಡಿಕೆಶಿ ವ್ಯಂಗ್ಯ

ಬಿಜೆಪಿ ಸಂಸದರು ಒಂದೇ ಒಂದು ದಿನವೂ ಪ್ರಧಾನಿಯವರನ್ನು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿಲ್ಲ. ಸಚಿವರಾದ ಪ್ರಹ್ಲಾದ್ ಜೋಶಿ, ಸೋಮಣ್ಣ ‌ಅವರು ನಾವು ಮಾತನಾಡಿದ್ದೇವೆ ಎಂದು ಹೇಳಿದರು ಬಿಟ್ಟರೆ,‌ ಮಿಕ್ಕವರದ್ದು ಬರೀ ಬುಟ್ಟಿ ಬೇವಿನ ಸೊಪ್ಪು" ಎಂದು ವ್ಯಂಗ್ಯವಾಡಿದರು.

ಶಿವಮೊಗ್ಗ: ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಅನುದಾನ, ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಅನುಮತಿ ಸೇರಿದಂತೆ ಕರ್ನಾಟಕದ ಪರವಾಗಿ ಬಿಜೆಪಿ ಸಂಸದರು ಬಾಯಿ ಬಿಡಬೇಕು.‌ ಇಲ್ಲದಿದ್ದರೆ ರಾಜಿನಾಮೆ ನೀಡಿ ಮರು ಚುನಾವಣೆ ಎದುರಿಸಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲೆಸೆದರು.

ಲಕ್ಕವಳ್ಳಿಯ ಭದ್ರಾ ಅಣೆಕಟ್ಟು ಬಾಗಿನ ಅರ್ಪಣೆ ಬಳಿಕ ಐಬಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಅವರು ಮಾತನಾಡಿದರು. ಬಿಜೆಪಿ ಸಂಸದರು ಒಂದೇ ಒಂದು ದಿನವೂ ಪ್ರಧಾನಿಯವರನ್ನು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿಲ್ಲ. ಸಚಿವರಾದ ಪ್ರಹ್ಲಾದ್ ಜೋಶಿ, ಸೋಮಣ್ಣ ‌ಅವರು ನಾವು ಮಾತನಾಡಿದ್ದೇವೆ ಎಂದು ಹೇಳಿದರು ಬಿಟ್ಟರೆ,‌ ಮಿಕ್ಕವರದ್ದು ಬರೀ ಬುಟ್ಟಿ ಬೇವಿನ ಸೊಪ್ಪು" ಎಂದು ವ್ಯಂಗ್ಯವಾಡಿದರು.

ನಾವು ನಿಮ್ಮ ಬಳಿ ಬೇಡುತ್ತಿಲ್ಲ, ಕೊಡಿ ಎಂದು ಕೊರಗುತ್ತಿಲ್ಲ. ನಮ್ಮ ಹಕ್ಕಿನ ಬಗ್ಗೆ ಮಾತನಾಡುತ್ತಿದ್ದೇವೆ" ಎಂದು ಹೇಳಿದರು. ಬಿಜೆಪಿ ಸಂಸದರು ಎದುರುಗೊಂಡರೆ ಜನರು ಪ್ರಶ್ನೆ ಮಾಡಬೇಕು. ನಮ್ಮ‌ ಪಾಲಿನ ಹಣ ಕೊಡಿಸಿ ಎಂದು ಕೇಳಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಕೇಳಲು ರಾಜ್ಯದ ಬಿಜೆಪಿ ಸಂಸದರು ಬಾಯನ್ನೇ ಬಿಚ್ಚುತ್ತಿಲ್ಲ. ನಾನು ಎರಡು ಬಾರಿ ಪ್ರಧಾನಿಯವರು ಹಾಗೂ ಹಣಕಾಸು ಸಚಿವರನ್ನು ಭೇಟಿಯಾಗಿದ್ದೇನೆ. ಕೇಂದ್ರ ಜಲಶಕ್ತಿ ಸಚಿವರಲ್ಲಿಯೂ ಮನವಿ ಮಾಡಿದ್ದೇನೆ. ಆದರೆ ಬಿಜೆಪಿಯವರು ಬಾಯಿಯನ್ನೇ ಬಿಡುತ್ತಿಲ್ಲ" ಎಂದು ಬೇಸರ ವ್ಯಕ್ತಪಡಿಸಿದರು.

"ದೇವೇಂದ್ರ ಫಡ್ನವಿಸ್ ಅವರೇ ಆಲಮಟ್ಟಿ ಎತ್ತರ ಹೆಚ್ಚಳ ನಿಮ್ಮ ಹಕ್ಕಲ್ಲ, ನಮ್ಮ ಹಕ್ಕು. ಆಲಮಟ್ಟಿ ಎತ್ತರವನ್ನು 524 ಮೀಟರ್ ಗೆ ಎತ್ತರಿಸಲು ಅವಕಾಶ ನೀಡುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿರುವುದು ಸರಿಯಲ್ಲ" ಎಂದರು.

"ಚೆನ್ನಗಿರಿ ತಾಲ್ಲೂಕಿನಲ್ಲಿ 45 ಕೆರೆಗಳನ್ನು ತುಂಬಿಸಲು ರೂ.365 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.‌ ಭದ್ರಾ ಅಚ್ಚುಕಟ್ಟಿನ ಶಾಸಕರ ಕ್ಷೇತ್ರದ ಅನೇಕ‌ ಕೆಲಸಗಳಿಗೆ ನಾನು ಮಂಜೂರಾತಿ ನೀಡಿದ್ದೇನೆ. ಏಕೆಂದರೆ ಚುನಾವಣೆ ಹೊತ್ತಿಗೆ ಜನರು ಏನು ಕೆಲಸ ಮಾಡಿದ್ದಾರೆ ಎಂದು ನೋಡುತ್ತಾರೆ ಹೊರತು ಇನ್ನೇನನ್ನೂ ನೋಡುವುದಿಲ್ಲ" ಎಂದರು.

"ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಭದ್ರಾ ಅಣೆಕಟ್ಟುವಿನ ನಾಲೆಗಳು ದುರಸ್ತಿಯಾಗಬೇಕು ಎಂದು ಸುಮಾರು ರೂ.100 ಕೋಟಿ ಮೊತ್ತದ ಪ್ರಸ್ತಾವನೆ ಸಲ್ಲಿಸಿದ್ದಾರೆ. ಸಂಗಮೇಶ್ ಅವರು ಸುಮಾರು ರೂ.150 ಕೋಟಿ ವಿಶೇಷ ಅನುದಾನವನ್ನು ನನ್ನನ್ನು ಪುಸಲಾಯಿಸಿ ಜನರ ಕಲ್ಯಾಣಕ್ಕೆ ಪಡೆದುಕೊಂಡು ಬಿಟ್ಟಿದ್ದಾರೆ.

ಮಧು ಬಂಗಾರಪ್ಪ ಅವರಿಗೆ, ಸಾಗರದ ಬೇಳೂರು ಗೋಪಾಲಕೃಷ್ಣ ಅವರಿಗೂ ವಿಶೇಷ ಅನುದಾನಗಳನ್ನು ನೀಡಿದ್ದೇನೆ. ಪರಿಷತ್ ಸದಸ್ಯರಾದ ಬಲ್ಕಿಸ್ ಬಾನು ಅವರು ಭದ್ರಾವತಿ ಹಾಗೂ ಶಿವಮೊಗ್ಗದ ಬಗ್ಗೆ ಅಪಾರ ಕಾಳಜಿಯಿಟ್ಟುಕೊಂಡು ಅನುದಾನಗಳನ್ನು ಪಡೆಯುತ್ತಿದ್ದಾರೆ. ಎಸ್.ಎಸ್. ಮಲ್ಲಿಕಾರ್ಜುನ ಅವರು ಸಹ ವಿಶೇಷ ಕಾಳಜಿವಹಿಸಿ ಭದ್ರಾ ಅಚ್ಚುಕಟ್ಟು ಪ್ರದೇಶಗಳ ಜನರ ಪರವಾಗಿ ಕೆಲಸ ಮಾಡುತ್ತಿದ್ದಾರೆ" ಎಂದು ಹೇಳಿದರು.

ಬಯಲು ಸೀಮೆಯ ಜನರ ಬದುಕಿಗೂ ಭದ್ರಾ ಅಣೆಕಟ್ಟು ಜೀವನಾಡಿಯಾಗಿದೆ. ರೈತರ ಜೀವನ ಹಸನು ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಏಕೆಂದರೆ ಸಂಬಳವಿಲ್ಲದೆ, ನಿವೃತ್ತಿ ಹೊಂದದೆ, ಪಿಂಚಣಿ ಪಡೆಯದೇ ಸದಾ ದುಡಿಯುವ ಕಾಯಕಯೋಗಿ ರೈತ" ಎಂದರು.

ಕಾಂಗ್ರೆಸ್ ಸರ್ಕಾರದ ಜನಪ್ರತಿನಿಧಿಗಳು ಜನರ ಪರವಾಗಿ, ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಮೇಲೆ ಜನರಿಗೆ ನಂಬಿಕೆಯಿದೆ.‌ ಈ ನಂಬಿಕೆಯನ್ನು ‌ನಾವು ಉಳಿಸಿಕೊಂಡಿದ್ದೇವೆ. ಅವಕಾಶ ಸಿಕ್ಕಾಗ ಪುಣ್ಯ ಕಾರ್ಯಗಳನ್ನು ಮಾಡಬೇಕು ಎಂದು ಹಿರಿಯರು ಹೇಳಿದ್ದಾರೆ. ನಾವು ಜನಸೇವೆಯೇ ಪುಣ್ಯ ಕಾರ್ಯ ಎಂದು ಮಾಡುತ್ತಿದ್ದೇವೆ. ಮಾತು ಕೊಡುವುದು ದೊಡ್ಡದಲ್ಲ, ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ದೊಡ್ಡದು" ಎಂದರು.

"ದೊಡ್ಡ ಇತಿಹಾಸ ಹೊಂದಿರುವ ಅಣೆಕಟ್ಟು ಇದಾಗಿದ್ದು, 1947 ರಲ್ಲಿ ಕಟ್ಟಲು ಪ್ರಾರಂಭ ಮಾಡಲಾಯಿತು. 1965 ರಲ್ಲಿ ಕಾರ್ಯಚಾರಣೆ ಪ್ರಾರಂಭ ಮಾಡಿತು. ಇದರ ನಿರ್ಮಾಣಕ್ಕೆ ವಿಶ್ವೇಶ್ವರಯ್ಯ ಅವರ ಕೊಡುಗೆಯೂ ಇದೆ. ಇಷ್ಟು ವರ್ಷದ ಇತಿಹಾಸದಲ್ಲಿ ಜುಲೈ ತಿಂಗಳಲ್ಲಿ ತುಂಬಿರುವುದು ಮೂರು ಬಾರಿ ಮಾತ್ರ. ಈ ವರ್ಷ ಗರಿಷ್ಠ ಮಟ್ಟ ತಲುಪಿ ಇತಿಹಾಸ ನಿರ್ಮಾಣ ಮಾಡಿದೆ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ 'ರಾಜಾತಿಥ್ಯ': ಇಬ್ಬರು ಅಧಿಕಾರಿಗಳು ಅಮಾನತು; ಮುಖ್ಯ ಅಧೀಕ್ಷಕ ಎತ್ತಂಗಡಿ; ತನಿಖೆಗೆ ಸಮಿತಿ ರಚನೆ; Video

ವೈಟ್-ಕಾಲರ್ ಭಯೋತ್ಪಾದಕ ಪರಿಸರ ಅನಾವರಣ; 350 ಕೆಜಿ ಸ್ಫೋಟಕಗಳ ಪತ್ತೆ ಬೆನ್ನಲ್ಲೆ ವೈದ್ಯರ ಮನೆಯಿಂದ 2,563 ಕೆಜಿ ಸ್ಫೋಟಕಗಳು ವಶಕ್ಕೆ!

ಕಾರಿನಲ್ಲಿ ಎಕೆ-47 ರೈಫಲ್ ಇಟ್ಟುಕೊಂಡಿದ್ದ ಲಖನೌ ವೈದ್ಯೆಯ ಬಂಧನ!

ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ 14 ಮೀನುಗಾರರ ಬಂಧನ

Hyderabad: ಬ್ಲೈಂಡ್ ಸ್ಪಾಟ್ ಗೆ ಮತ್ತೊಂದು ಬಲಿ, ತಿರುವಿನಲ್ಲಿ ಬಾಲಕನ ಮೇಲೆ ಹರಿದ ಲಾರಿ!, Video

SCROLL FOR NEXT