ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಸೆಪ್ಟೆಂಬರ್ 16 ವರೆಗೆ ಮಳೆ; ಬೆಂಗಳೂರಿಗೆ ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ

ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಇನ್ನೊಂದಿಷ್ಟು ದಿನ ಮುಂದುವರೆಯಲಿದ್ದು ಮುಂದಿನ ನಾಲ್ಕು ದಿನ ಅಂದರೆ ಸೆಪ್ಟೆಂಬರ್ 16ರವರೆಗೂ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸೆಪ್ಟೆಂಬರ್ 16ವರೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿರಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಜಾರಿ

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅಬ್ಬರ ಮತ್ತೊಂದಿಷ್ಟು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಅಂತೆಯೇ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದೆ. ವಿಜಯಪುರ, ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಅಲ್ಲದೆ ದಕ್ಷಿಣ ಒಳನಾಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್