ಸಿದ್ದರಾಮಯ್ಯ  
ರಾಜ್ಯ

ಹಿಮಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ, ದುರಂತ: ಕರ್ನಾಟಕ ಸರ್ಕಾರ 5 ಕೋಟಿ ರೂ ಪರಿಹಾರ

ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ.

ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಮಳೆ, ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ ದುರಂತಗಳಿಂದ ನೂರಾರು ಮಂದಿ ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ದುರಂತಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪತ್ತು ಪರಿಹಾರ ಮತ್ತು ಪುನರ್ವಸತಿಗೆ 5 ಕೋಟಿ ರೂಪಾಯಿ ಆರ್ಥಿಕ ನೆರವು ಪ್ರಕಟಿಸಿದ್ದಾರೆ.

‘ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ.

ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಅದನ್ನು ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ.

ವಿಪತ್ತಿಗೀಡಾದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಹಣವನ್ನು ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಳೆದ ಮಂಗಳವಾರ ಪ್ರವಾಹಪೀಡಿತ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ, ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದರು. ಈ ವೇಳೆ 1,500 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶ್ರೀನಗರ ನೌಗಾಮ್ ಪೊಲೀಸ್ ಠಾಣೆಯಲ್ಲಿ ಭಾರೀ ಸ್ಫೋಟ: 9 ಸಾವು, 27 ಮಂದಿ ಗಾಯ, ದೆಹಲಿ ಸ್ಫೋಟ ಬೆನ್ನಲ್ಲೇ ಮತ್ತೊಂದು ಘಟನೆ

ನೀರಾವರಿ ಯೋಜನೆ: ಡಿಕೆಶಿ ಕೊಂಡಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ಅನ್ಯಾಯ ಬಗ್ಗೆ ಮೌನ ತಾಳಿರುವ BJP-JDS ಸಂಸದರ ವಿರುದ್ಧ ಕಿಡಿ

ಬೆಳೆಗಾರರ ಹೆಸರಲ್ಲಿ ಕಬ್ಬಿನ ಟ್ರ್ಯಾಕ್ಟರ್'ಗಳಿಗೆ ಬೆಂಕಿ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಮುಸ್ಲಿಂ-ಯಾದವ್ RJD ತುಷ್ಠಿಕರಣಕ್ಕೆ ಬುದ್ಧಿ ಕಲಿಸಿದ್ದು ನಮ್ಮ ಮಹಿಳೆ-ಯುವಕರ M-Y ಸೂತ್ರ: ಪ್ರಧಾನಿ ಮೋದಿ

ಬಿಹಾರ ಚುನಾವಣೆಯಲ್ಲಿ ಅನ್ಯಾಯ; ಫಲಿತಾಂಶಗಳು ಆಘಾತಕಾರಿ: ಹೀನಾಯ ಸೋಲಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ!

SCROLL FOR NEXT