ದಾವಣಗೆರೆ: ಹಿಂದೂ ದೇವರಿಗೆ ಅವಮಾನ ಮಾಡಿದವರ ಮನೆಗಳಿಗೆ ನುಗ್ಗಿ ಹೊಡಿತೀವಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ, ಸಾಗರದಲ್ಲಿ ಉಗುಳುವ ಕೃತ್ಯವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹಿಂದೂ ಹಬ್ಬಗಳನ್ನು ಮಾತ್ರವೇ ಹೀಗೆ ಅವಮಾನಿಸಲಾಗುತ್ತಿದೆ. ಶಾಂತಿಯಿಂದ ಬದುಕುವ ಹಿಂದೂಗಳ ಸಹನೆಗೂ ಮಿತಿಯಿದೆ. ಹಿಂದೂ ದೇವರಿಗೆ ಅವಮಾನ ಮಾಡಿದವರ ಮನೆಗಳಿಗೆ ನುಗ್ಗಿ ಹೊಡಿತೀವಿ ಎಂದರು.
ಕನ್ನಡಕ್ಕೆ ಬೂಕರ್ ಪ್ರಶಸ್ತಿ ತಂದುಕೊಟ್ಟ ಬಾನು ಮುಷ್ತಾಕ್ ಅಭಿನಂದನೀಯರು. ಆದರೆ, ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಯೋಗ್ಯತೆ ಇಲ್ಲ. ಮುಸ್ಲಿಂ ಮಹಿಳೆಯೊಬ್ಬರು ದಸರಾ ಉದ್ಘಾಟನೆ ಮಾಡುವುದನ್ನು ಒಪ್ಪುವುದಿಲ್ಲ. ದಸರಾ ಧಾರ್ಮಿಕ ಕಾರ್ಯಕ್ರಮವೇ ಹೊರತು ಸರ್ಕಾರಿ ಉತ್ಸವ ಅಲ್ಲ ಎಂದರು.
ವೀರಶೈವ ಲಿಂಗಾಯಿತರು ಕೂಡಾ ಹಿಂಧೂ ಧರ್ಮಿಯರೇ. ಅವರ ಆಚಾರ-ವಿಚಾರ ಎಲ್ಲವೂ ಹಿಂದೂ ಧರ್ಮಕ್ಕೆ ಅನುಗುಣವಾಗಿಯೇ ಇದೆ. ಹಿಂದೂ ಧರ್ಮದಿಂದ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ ಪ್ರಮೋದ್ ಮುತಾಲಿಕ್, ಮೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ನಿಲ್ಲಿಸದೇ ಇದ್ದರೆ ಕಾಂಗ್ರೆಸ್ ಸರ್ವನಾಶ ಆಗಲಿದೆ ಎಂದು ಎಚ್ಚರಿಕೆ ನೀಡಿದರು.