ಬೆಂಗಳೂರು: ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕನಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯದ ತೋಟದ ರಸ್ತೆಯಲ್ಲಿರುವ ಸಣ್ಣಕ್ಕಿಬೈಲಿನಲ್ಲಿ ಈ ಅಪಘತಾ ಸಂಭವಿಸಿದ್ದು, ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ.
ಮೃತ ಬಾಲಕನನ್ನು ಶಶಾಂಕ್(12) ಎಂದು ಗುರುತಿಸಲಾಗಿದ್ದು, ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಕೆಳಗ ಬಿದ್ದ ಬಾಲಕನ ಮೇಲೆಯೇ ವಾಹನ ಹರಿದು ಹೋಗಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಪಘಾತದ ಬಳಿಕ ಗೂಡ್ಸ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.