ಪ್ರಿಯಾಂಕ್ ಖರ್ಗೆ ಟ್ವೀಟ್ 
ರಾಜ್ಯ

ತಲೆ ತೆಗೆಯಿರಿ, ತೊಡೆ ಮುರಿಯಿರಿ ಎನ್ನುವ BJP ನಾಯಕರು ತಮ್ಮ ಮಕ್ಕಳ ಕೈಗೆ ಲಾಂಗು ಮಚ್ಚು ಕೊಟ್ಟು ಬೀದಿಗೆ ಬಿಡುವರೇ?: ಪ್ರಿಯಾಂಕ್ ಖರ್ಗೆ; Video

ತಮ್ಮ ಮಕ್ಕಳಿಗೆ ತ್ರಿಶೂಲ ದೀಕ್ಷೆ ಕೊಡಲಿ, ಕೈಗೆ ದೊಣ್ಣೆ ಕೊಡಲಿ. ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕು ಎಂಬ RSS ಫಾರ್ಮಾನನ್ನು ಯಾವ ಬಿಜೆಪಿಗರು ಪಾಲನೆ ಮಾಡಲು ಮುಂದಾಗಿದ್ದಾರೆ?

ಬೆಂಗಳೂರು: ತಲೆ ತೆಗೆಯಿರಿ, ತೊಡೆ ಮುರಿಯಿರಿ ಎನ್ನುತ್ತಿರುವ ಬಿಜೆಪಿ ನಾಯಕರು ತಮ್ಮ ಮಕ್ಕಳ ಕೈಗೆ ದೊಣ್ಣೆ, ಲಾಂಗು ಮಚ್ಚುಗಳನ್ನು ಕೊಟ್ಟು ಬೀದಿಗೆ ಬಿಡುತ್ತಾರೆಯೇ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೊರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರಾ? ಬಡವರ ಮನೆ ಮಕ್ಕಳನ್ನು ಬಾವಿಗೆ ತಳ್ಳಿ ರಾಜಕೀಯದ ಆಳ ನೋಡುವ ಬದಲು ತಮ್ಮ ಮಕ್ಕಳ ಹೆಗಲಿಗೆ ಕೇಸರಿ ಶಾಲು, ಕೈಗೆ ದೊಣ್ಣೆ ಮಚ್ಚು ಕೊಟ್ಟು ಧರ್ಮ ರಕ್ಷಣೆಯ ಕೈಂಕರ್ಯಕ್ಕೆ ಬಿಡಬೇಕು ಎಂದು ಸಲಹೆ ನೀಡಿದ್ದಾರೆ.

ಬಿಜೆಪಿ ನಾಯಕರು ಧರ್ಮರಕ್ಷಣೆಯ ಬೋಧನೆ, ಪ್ರಚೋದನೆಗಳನ್ನು ತಮ್ಮ ಮನೆಯಿಂದಲೇ ಶುರು ಮಾಡಲಿ, ತಮ್ಮ ಮಕ್ಕಳಿಗೆ ತ್ರಿಶೂಲ ದೀಕ್ಷೆ ಕೊಡಲಿ, ಕೈಗೆ ದೊಣ್ಣೆ ಕೊಡಲಿ. ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕು ಎಂಬ RSS ಫಾರ್ಮಾನನ್ನು ಯಾವ ಬಿಜೆಪಿಗರು ಪಾಲನೆ ಮಾಡಲು ಮುಂದಾಗಿದ್ದಾರೆ?

ಮಕ್ಕಳು ಹೆರುವುದರ ಹೊರೆಯೂ ಬಡವರಿಗೆ ಮಾತ್ರವೇ? ಅಥವಾ ಬಿಜೆಪಿಗರಿಗೂ ಅನ್ವಯಿಸುತ್ತದೆಯೇ? ಅಮಾಯಕ ಹಿಂದೂ ಕಾರ್ಯಕರ್ತರು ಬಿಜೆಪಿ ನಾಯಕರೆದುರು ತಲೆ ತೆಗೆಯುವ ಕೆಲಸಕ್ಕೆ ನಿಮ್ಮ ಮಕ್ಕಳು ಮುಂದಿರಲಿ, ನಾವು ಅವರ ಹಿಂದೆ ಇರುತ್ತೇವೆ“ ಎಂಬ ಒಂದೇ ಒಂದು ಬೇಡಿಕೆ ಮುಂದಿಡಲಿ, ಬಿಜೆಪಿ ನಾಯಕರ ಅಸಲಿ ಬಂಡವಾಳವನ್ನು ಕಾಣಬಹುದು ಎಂದು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT