ಸರ್.ಎಂ ವಿಶ್ವೇಶ್ವರಯ್ಯ ದಿನಾಚರಣೆಯಲ್ಲಿ ಡಿಕೆ ಶಿವಕುಮಾರ್ 
ರಾಜ್ಯ

ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕು ಎಂದು ಬಯಸಿದ್ದರು, ಆದರೆ ನಾನು ಸರಿಯಾಗಿ ಓದಲಿಲ್ಲ: ಡಿ.ಕೆ ಶಿವಕುಮಾರ್

ಇಂದು ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ (ಇಂಜಿನಿಯರ್ಸ್) ದಿನ ಆಚರಿಸಲಾಗುತ್ತಿದೆ. ಸಚಿವನಾಗಿ ಜಿಬಿಎ ಹಾಗೂ ನೀರಾವರಿ ಇಲಾಖೆಯಲ್ಲಿರುವ ಇಂಜಿನಿಯರ್ ಗಳ ಜೊತೆ ಕೆಲಸ ಮಾಡುತ್ತಿದ್ದೇನೆ.

ಬೆಂಗಳೂರು: ಈ ದೇಶದ ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.

ಇಂಜಿನಿಯರುಗಳ ದಿನಾಚರಣೆ ಅಂಗವಾಗಿ ನಗರದ ಕೆ.ಆರ್. ವೃತ್ತದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಇಂದು ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ (ಇಂಜಿನಿಯರ್ಸ್) ದಿನ ಆಚರಿಸಲಾಗುತ್ತಿದೆ. ಸಚಿವನಾಗಿ ಜಿಬಿಎ ಹಾಗೂ ನೀರಾವರಿ ಇಲಾಖೆಯಲ್ಲಿರುವ ಇಂಜಿನಿಯರ್ ಗಳ ಜೊತೆ ಕೆಲಸ ಮಾಡುತ್ತಿದ್ದೇನೆ. ಈ ಹಿಂದೆ ನಗರಾಭಿವೃದ್ಧಿ ಹಾಗೂ ಇಂಧನ ಸಚಿವನಾಗಿದ್ದಾಗಲೂ ಕೆಲಸ ಮಾಡಿದ್ದೆ. ಇಂಜಿನಿಯರ್ ಗಳು ದೇಶ ನಿರ್ಮಿಸುವವರು” ಎಂದು ಹೇಳಿದರು.

“ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕು ಎಂದು ಬಯಸಿದ್ದರು. ಆದರೆ ನಾನು ಸರಿಯಾಗಿ ಓದಲಿಲ್ಲ. ನಮ್ಮ ತಂದೆ ಆಸೆ ಈಡೇರಿಸಬೇಕು ಎಂದು ಇಂಜಿನಿಯರಿಂಗ್ ಕಾಲೇಜು ಆರಂಭಿಸಿದೆ. ನಮ್ಮ ಮನೆಯಲ್ಲಿ ಇಬ್ಬರು ಮಕ್ಕಳು ಇಂಜಿನಿಯರ್. ಒಬ್ಬರು ಸಿವಿಲ್ ಇಂಜಿನಿಯರ್ ಮತ್ತೊಬ್ಬರು ಎಲೆಕ್ಟ್ರಿಕಲ್ ಇಂಜಿನಿಯರ್” ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಕ್ರಮ ನಡೆದರೆ ಮಧ್ಯಪ್ರವೇಶಿಸುತ್ತೇವೆ- ಸುಪ್ರೀಂ ಕೋರ್ಟ್: ಬಿಹಾರ SIR ವಿರುದ್ಧದ ಅರ್ಜಿಗಳ ಅಂತಿಮ ವಿಚಾರಣೆ ಅಕ್ಟೋಬರ್ 7ಕ್ಕೆ ನಿಗದಿ

ಜಾರ್ಖಂಡ್‌: ತಲೆಗೆ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಸೇರಿ ಮೂವರ ಹತ್ಯೆ!

ದೆಹಲಿ: ಬೈಕ್​ಗೆ BMW ಕಾರು ಡಿಕ್ಕಿ; ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಸಾವು, ಪತ್ನಿಗೆ ಗಾಯ

Waqf Amendment Act: ಕೆಲವೊಂದು ಅಂಶಗಳಿಗೆ ತಡೆ ನೀಡಿ ಸುಪ್ರೀಂ ಕೋರ್ಟ್ 'ಮಧ್ಯಂತರ ಆದೇಶ' ಪ್ರಕಟ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: PIL ವಜಾಗೊಳಿಸಿದ ಹೈಕೋರ್ಟ್; ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ!

SCROLL FOR NEXT