ಧರ್ಮಸ್ಥಳ ಪ್ರಕರಣದ ಮುಸುಕುಧಾರಿ ಸಾಕ್ಷಿದಾರ 
ರಾಜ್ಯ

ಧರ್ಮಸ್ಥಳ ಪ್ರಕರಣ: ಪಿತೂರಿ ನಡೆಸಿದವರ ಮುಟ್ಟದಂತೆ SIT ಗೆ ರಾಜಕೀಯ ಒತ್ತಡ: ಸಂಸದ ಆರೋಪ

ಎಸ್ಐಟಿಯವರು ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ಮುಟ್ಟಿಲ್ಲ. ಎಸ್ಐಟಿಯವರು ನಮ್ಮನ್ನು ಮುಟ್ಟಲ್ಲ ಅಂತ ಅವರಿಗೂ ಗ್ಯಾರಂಟಿ ಆಗಿದೆ. ಅದಕ್ಕಾಗಿಯೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಹೊಸ ಹೊಸ ದೂರುಗಳು ಬರುತ್ತಿವೆ. ಅವುಗಳನ್ನೂ ತ‌ನಿಖೆ ಮಾಡುತ್ತಿದ್ದಾರೆ.

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ ನಡೆಸಿದವರನ್ನು ಮುಟ್ಟದಂತೆ ಎಸ್‌ಐಟಿ ಮೇಲೆ ರಾಜಕೀಯ ಒತ್ತಡವಿದೆ. ನಿರೀಕ್ಷೆಯಂತೆ ತನಿಖೆ ನಡೆಯುತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಸ್ಕ್ ಮ್ಯಾನ್​ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ಎಸ್ಐಟಿ ಇಲ್ಲಿವರೆಗೆ ಆಗಿರುವ ತನಿಖೆಯ ಬಗ್ಗೆ ವರದಿ ಕೊಡಲಿ ಎಂದು ಆಗ್ರಹಿಸಿದರು.

ಎಸ್ಐಟಿಯವರು ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ಮುಟ್ಟಿಲ್ಲ. ಎಸ್ಐಟಿಯವರು ನಮ್ಮನ್ನು ಮುಟ್ಟಲ್ಲ ಅಂತ ಅವರಿಗೂ ಗ್ಯಾರಂಟಿ ಆಗಿದೆ. ಅದಕ್ಕಾಗಿಯೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಹೊಸ ಹೊಸ ದೂರುಗಳು ಬರುತ್ತಿವೆ. ಅವುಗಳನ್ನೂ ತ‌ನಿಖೆ ಮಾಡುತ್ತಿದ್ದಾರೆ. ಪಿತೂರಿಗಾರರ ಹಿಂದೆ ಹೋಗದಂತೆ ಎಸ್‌ಐಟಿ ಮೇಲೆ ರಾಜಕೀಯ ಒತ್ತಡವಿದೆ. ಅದಕ್ಕಾಗಿಯೇ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಇಲ್ಲಿಯವರೆಗೆ ನಡೆದ ತನಿಖೆಯ ಬಗ್ಗೆ ಎಸ್‌ಐಟಿ ವರದಿ ನೀಡಬೇಕು ಎಂದು ಹೇಳಿದರು.

ಜಾತಿ ಜನಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಫಲಾನುಭವಿಗಳ ಡೇಟಾ ಸಂಗ್ರಹಕ್ಕೆ ಸರ್ಕಾರ ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳಿಗೂ ಸಾಮಾಜಿ ಆರ್ಥಿಕ ಸಮೀಕ್ಷೆಗೂ ಏನು ಸಂಬಂಧ. ಇದು ರಾಜಕೀಯ ಪ್ರೇರಿತವಾದ ಸಮೀಕ್ಷೆ. ಗ್ಯಾರಂಟಿ ಫಲಾನುಭವಿಗಳ ಪರಿಶೀಲನೆಗೆ ಮಾಹಿತಿ ಸಂಗ್ರಹ ಜಾತಿ ಜನಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಬಣ ಮುಂದಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ!

SCROLL FOR NEXT