ದೂರುದಾರ ಚಿನ್ನಯ್ಯ 
ರಾಜ್ಯ

ಧರ್ಮಸ್ಥಳ ಪ್ರಕರಣ: ದೂರುದಾರ 'ಬುರುಡೆ' ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಮಂಗಳೂರು: ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ಹಲವಾರು ಕೊಲೆ ಮತ್ತು ಅತ್ಯಾಚಾರಗಳು ನಡೆದಿದ್ದು, ನಾನೇ ಆ ಶವಗಳನ್ನು ಹೂತು ಹಾಕಿರುವುದಾಗಿ ಹೇಳಿ, ಈಗ ಜೈಲು ಪಾಲಾಗಿರುವ ಸಿ ಎನ್ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.

ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

"ಅನಾರೋಗ್ಯ" ಮತ್ತು "ಕೌಟುಂಬಿಕ ಜವಾಬ್ದಾರಿಗಳ" ಆಧಾರದ ಮೇಲೆ ಜಾಮೀನು ಕೋರಿ ಚಿನ್ನಯ್ಯ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನೀಡದಂತೆ ಎಸ್​ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಅವರು ಚಿನ್ನಯ್ಯನ ಜಾಮೀನು ಅರ್ಜಿ ವಜಾ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಚಿನ್ನಯ್ಯ ತೋರಿಸಿದ್ದ ಎಲ್ಲಾ ಜಾಗಗಳಲ್ಲಿ ಅಗೆದು ನೋಡಿದರೂ ಯಾವುದೇ ಶವದ ಕುರುಹುಗಳು ಪತ್ತೆಯಾಗಿಲ್ಲ. ಹೀಗಾಗಿ ಚಿನ್ನಯ್ಯನನ್ನು ಆಗಸ್ಟ್ 23 ರಂದು ಬಂಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?

ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!

ಸು...ರ್ ಕುಮಾರ್: ಹಸ್ತ ಲಾಘವ ಕೊಡದ ಟೀಂ ಇಂಡಿಯಾ ನಾಯಕನಿಗೆ ಅವಹೇಳನಕಾರಿ ಶಬ್ದದಿಂದ ನಿಂದಿಸಿದ ಪಾಕ್ ಮಾಜಿ ಕ್ರಿಕೆಟಿಗ

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

SCROLL FOR NEXT