ಧರ್ಮಸ್ಥಳ ಪ್ರಕರಣ 
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಸ್ಥಳ ಮಹಜರು ಬಗ್ಗೆ ಕಾನೂನು ಅಭಿಪ್ರಾಯ ಪಡೆಯಲು SIT ಮುಂದು..!

ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆಗಳು, ಮೂರ್ನಾಲ್ಕು ತಲೆಬುರುಡೆಯನ್ನು ಸ್ಥಳ ಮಹಜರು ವೇಳೆ ನೋಡಿದ್ದೆ ಎಂದು ವಿಡಿಯೋ ಮಾಡಿ ವಿಠಲಗೌಡ ಹರಿಬಿಟ್ಟಿದ್ದರು. ಎಸ್‌ಐಟಿ ಅಧಿಕಾರಿಗಳ ಸಮ್ಮುಖದಲ್ಲೇ ನೋಡಿದ್ದಾಗಿಯೂ ಹೇಳಿದ್ದರು.

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶೋಧ ಕಾರ್ಯಾಚರಣೆ ನಡೆಸುವ ಕುರಿತು ಕಾನೂನು ಅಭಿಪ್ರಾಯ ಪಡೆಯಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಸ್ಥಳ ಮಹಜರು ಕುರಿತು ಕಾನೂನು ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಎಸ್‌ಐಟಿಗೆ ಸಂಬಂಧಿಸಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆಗಳು, ಮೂರ್ನಾಲ್ಕು ತಲೆಬುರುಡೆಯನ್ನು ಸ್ಥಳ ಮಹಜರು ವೇಳೆ ನೋಡಿದ್ದೆ ಎಂದು ವಿಡಿಯೋ ಮಾಡಿ ವಿಠಲಗೌಡ ಹರಿಬಿಟ್ಟಿದ್ದರು. ಎಸ್‌ಐಟಿ ಅಧಿಕಾರಿಗಳ ಸಮ್ಮುಖದಲ್ಲೇ ನೋಡಿದ್ದಾಗಿಯೂ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಬಂಗ್ಲೆಗುಡ್ಡೆಗೆ ಸ್ಥಳ ಮಹಜರು ನಡೆಸಲು ಎಸ್ಐಟಿ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದು, ಇದಕ್ಕಾಗಿ ಕಾನೂನು ಅಭಿಪ್ರಾಯ ಪಡೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ವಿಠಲಗೌಡ ಹೇಳಿದಂತೆ ಸ್ಥಳದಲ್ಲಿ ಅಷ್ಟೊಂದು ಮಾನವ ಅಸ್ತಿಪಂಜರಗಳು ಕಂಡು ಬಂದಿದ್ದೇ ಆದರೆ, ಅಷ್ಟೊಂದು ಮಾನವ ಅಸ್ತಿ ಪಂಜರಗಳು ಅಲ್ಲೇಕೆ ಬಂದವು ಎಂಬುದರ ಕುರಿತು ತನಿಖೆ ನಡೆಸಬೇಕಿದೆ. ವಿಠಲಗೌಡ ತಲೆಬುರುಡೆಯನ್ನು ತೆಗೆದ ಸ್ಥಳವನ್ನು ಈಗಾಗಲೇ ತೋರಿಸಿದ್ದಾರೆ. ಹೀಗಾಗಿ ಆತನಿಲ್ಲದೆ ನಾವು ಸ್ಥಳ ಮಹಜರು ನಡೆಸಬಹುದಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶವಾಗಿರುವುದರಿಂದ ಸಹಾಯಕ್ಕಾಗಿ ಅರಣ್ಯ ಇಲಾಖೆಗೆ ತಿಳಿಸಬೇಕಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Op Sindoor: ಮಸೂದ್ ಅಜಾರ್ ಕುಟುಂಬ ಹೇಗೆ ಛಿದ್ರಗೊಂಡಿದೆ ಅನ್ನೋದಕ್ಕೆ ಈ Video ಸಾಕ್ಷಿ! JeM ಕಮಾಂಡರ್ ಹೇಳಿದ್ದು ಏನು?

ಡೆಹ್ರಾಡೂನ್​​ನಲ್ಲಿ ಮೇಘಸ್ಫೋಟ: ಉಕ್ಕಿ ಹರಿಯುತ್ತಿರುವ ತಮ್ಸಾ ನದಿ; ಕನಿಷ್ಟ 5 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ-ಭೂಕುಸಿತ: ಮೂವರ ಸಾವು, ಬಸ್ ನಿಲ್ದಾಣ ಮುಳುಗಡೆ

Trade Talks: ಸುಂಕದ ವಿವಾದ, ಭಾರತ- ಅಮೆರಿಕ ಉದ್ದೇಶಿತ ವ್ಯಾಪಾರ ಒಪ್ಪಂದದ ಮಾತುಕತೆ ಆರಂಭ: ಪೀಟರ್ ನವರೊ ಹೇಳಿದ್ದು ಏನು?

ದೆಹಲಿ BMW ಅಪಘಾತ: ಪ್ರಮುಖ ಆರೋಪಿ ಗಗನ್‌ಪ್ರೀತ್ ಮದ್ಯ ಸೇವಿಸಿಲ್ಲ

SCROLL FOR NEXT