ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಬೆಳೆ ಇಳುವರಿ ಹೆಚ್ಚಿಸಲು ಮಣ್ಣಿನ ಫಲವತ್ತತೆ ಮೇಲೆ ಹೆಚ್ಚು ಗಮನಹರಿಸಿ: ಕೃಷಿ ವಿಶ್ವವಿದ್ಯಾಲಯಗಳಿಗೆ ಸಿಎಂ ಸೂಚನೆ

ರೈತರು ಬುದ್ಧಿವಂತರು. ಆದರೆ, ಅವರಿಗೆ ತಜ್ಞರಿಂದ ಬೆಂಬಲ ಮತ್ತು ಸರಿಯಾದ ಮಾರ್ಗದರ್ಶನ ಬೇಕಿದೆ. ರಾಜ್ಯದ ಶೇಕಡಾ 60 ಕ್ಕಿಂತ ಹೆಚ್ಚು ಭೂಮಿ ಮಳೆಯಾಶ್ರಿತವಾಗಿದ್ದು, ಬೆಳೆಗಳಿಗೆ ಮೊದಲ ದಿನದಿಂದಲೇ ಸರಿಯಾದ ನಿರ್ವಹಣೆ ಅಗತ್ಯವಿದೆ.

ಬೆಂಗಳೂರು: ನೈಸರ್ಗಿಕ ರೀತಿಯಲ್ಲಿ ಬೆಳೆ ಇಳುವರಿ ಹೆಚ್ಚಿಸಲು ಮಣ್ಣಿನ ಫಲವತ್ತತೆಯ ಮೇಲೆ ಹೆಚ್ಚು ಗಮನಹರಿಸುವಂತೆ ಕೃಷಿ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚನೆ ನೀಡಿದರು.

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ (ಯುಎಎಸ್) ಆವರಣದಲ್ಲಿ ಸೋಮವಾರ ನಡೆದ ನಾಲ್ಕು ದಿನಗಳ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ, ಆರೋಗ್ಯದ ಅಂಶಗಳನ್ನು ಪರಿಗಣಿಸಿ, ಸರ್ಕಾರ ರಾಗಿ ಬೆಳೆಗಳನ್ನು ಪ್ರೋತ್ಸಾಹಿಸುತ್ತಿದೆ. ಸರ್ಕಾರದಿಂದ ಮಾರುಕಟ್ಟೆ ಮತ್ತು ಖರೀದಿ ಕೇಂದ್ರಗಳನ್ನು ಒದಗಿಸುವ ವ್ಯವಸ್ಥೆಗಳು ನಡೆಯುತ್ತಿವೆ ಎಂದು ಹೇಳಿದರು.

ನಮ್ಮ ರೈತರು ಬುದ್ಧಿವಂತರು. ಆದರೆ, ಅವರಿಗೆ ತಜ್ಞರಿಂದ ಬೆಂಬಲ ಮತ್ತು ಸರಿಯಾದ ಮಾರ್ಗದರ್ಶನ ಬೇಕಿದೆ. ರಾಜ್ಯದ ಶೇಕಡಾ 60 ಕ್ಕಿಂತ ಹೆಚ್ಚು ಭೂಮಿ ಮಳೆಯಾಶ್ರಿತವಾಗಿದ್ದು, ಬೆಳೆಗಳಿಗೆ ಮೊದಲ ದಿನದಿಂದಲೇ ಸರಿಯಾದ ನಿರ್ವಹಣೆ ಅಗತ್ಯವಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ‌ ನಡೆಸಬೇಕು. ಇದಕ್ಕೆ ಅಗತ್ಯವಾದ ಹಣಕಾಸಿನ‌ ನೆರವನ್ನು ಒದಗಿಸಲು ಸರ್ಕಾರ ಸಿದ್ಧವಿದೆ.

ಸದ್ಯ ರಾಜ್ಯ ಹಾಲಿನ‌ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿ ನಾವು ಅಪಾರ ಪ್ರಗತಿ ಸಾಧಿಸಿದ್ದೇವೆ. ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ.

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು. ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು, ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಅವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಇವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕೃಷಿ ಸಚಿವರು ಕ್ರಮ ತೆಗೆದುಕೊಳ್ಳಬೇಕಿದೆ.

ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ. ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ. ಮಳೆಹಾನಿಯಿಂದ ಆಗಿರುವ ಬೆಳೆ ಹಾನಿ ಮತ್ತು ಅನಾಹುತಗಳ ಬಗ್ಗೆ ಧಾರವಾಡ ಜಿಲ್ಲಾಡಳಿತ ಶೇ.90 ಪರಿಹಾರ ನೀಡಿ, ಪ್ರಗತಿಯ ವರದಿ ನೀಡಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರಿಗೆ ಅಭಿನಂದನೆಗಳು ಎಂದರು.

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾತನಾಡಿ, ರೈತರು ಕೃಷಿ ಮೇಳವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಏಕೆಂದರೆ ಅದು ಅವರ ಜ್ಞಾನವನ್ನು ಹೆಚ್ಚಿಸುತ್ತದೆ. ಜಿಲ್ಲೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೇಂದ್ರವನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮಾತನಾಡಿ, ರಾಜ್ಯದ ಕೆಲವರು ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ, ಅದು ನಿಜವಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ತೆಗೆದುಕೊಂಡಿದೆ. ಬೇಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆ ನೀಡುವ ಮೊದಲು ಅಂಕಿಅಂಶಗಳನ್ನು ಸರಿಯಾಗಿ ಪಡೆಯಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದಲ್ಲಿ ಜೈಶ್‍ನ 22 ವೈಟ್-ಕಾಲರ್ ಭಯೋತ್ಪಾದಕರು ಭಾಗಿ: ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ಎಚ್ಚರಿಕೆ

'RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; 100 ವರ್ಷಗಳಲ್ಲಿ ಮೊದಲ ಬಾರಿ ಕಾನೂನು ಪಾಲನೆ'

ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು - Video

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಗಳಿಗೆ 613 ಕೋಟಿ ರೂ. ಬಾಡಿಗೆ; ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಹೀಗಿವೆ

ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!

SCROLL FOR NEXT