ತಾವರ್ ಚಂದ್ ಗೆಹ್ಲೋಟ್  
ರಾಜ್ಯ

ಬಫರ್‌ ಝೋನ್‌ ಕಡಿತ ಮಸೂದೆ ವಾಪಸ್‌: ಸರ್ಕಾರದಿಂದ ಸ್ಪಷ್ಟೀಕರಣ ಕೇಳಿದ ರಾಜ್ಯಪಾಲ ಗೆಹ್ಲೋಟ್

ಕೆರೆಗಳ ಬಫರ್ ಝೋನ್‌ ಅನ್ನು 30 ಮೀಟರ್‌ಗೆ ಇಳಿಸುವುದರಿಂದ ಬೆಂಗಳೂರಿನ ನೀರಿನ ಭದ್ರತೆ ಮತ್ತು ಪರಿಸರ ವ್ಯವಸ್ಥೆಯ ಸಮಗ್ರತೆಗೆ ಅಪಾಯ ಉಂಟಾಗಲಿದೆ.

ಬೆಂಗಳೂರು: ಕೆರೆಗಳ ಸಂರಕ್ಷಿತ ಪ್ರದೇಶವನ್ನು (ಬಫರ್‌ ಝೋನ್‌) ಕಡಿಮೆ ಮಾಡಲು ಅವಕಾಶ ಕಲ್ಪಿಸುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆಯನ್ನು ಸ್ಪಷ್ಟೀಕರಣ ಕೇಳಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ರಾಜ್ಯ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ.

ಕೆರೆಗಳು ಮತ್ತು ರಾಜಕಾಲುವೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಸಂರಕ್ಷಿತ ಪ್ರದೇಶ ವನ್ನು ನಿಗದಿಪಡಿಸಲು ಹಾಗೂ ಬಫರ್‌ಝೋನ್‌ನಲ್ಲಿ ಸಾರ್ವಜನಿಕ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಮಸೂದೆ ತಿದ್ದುಪಡಿಗೆ ಸರ್ಕಾರ ಮುಂದಾಗಿತ್ತು. ಆದರೆ, ಸರ್ಕಾರದ ಈ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ನಾಗರಿಕರ ಸಂಘವಾದ ಬೆಂಗಳೂರು ಟೌನ್ ಹಾಲ್‌, ರಾಜ್ಯಪಾಲರಿಗೆ ಪತ್ರ ಬರೆದು ಮಸೂದೆಗೆ ಅಂಕಿತ ಹಾಕದಂತೆ ಮನವಿ ಮಾಡಿತ್ತು.

ಕೆರೆಗಳ ಬಫರ್ ಝೋನ್‌ ಅನ್ನು 30 ಮೀಟರ್‌ಗೆ ಇಳಿಸುವುದರಿಂದ ಬೆಂಗಳೂರಿನ ನೀರಿನ ಭದ್ರತೆ ಮತ್ತು ಪರಿಸರ ವ್ಯವಸ್ಥೆಯ ಸಮಗ್ರತೆಗೆ ಅಪಾಯ ಉಂಟಾಗಲಿದೆ. ಪರಿಸರ ಸಮತೋಲನ ಕಾಪಾಡಲು 30 ಮೀಟರ್‌ ಬದಲು 300 ಮೀಟರ್‌ಗೆ ಬಫರ್ ಝೋನ್‌ ಹೆಚ್ಚಿಸುವ ಅಗತ್ಯವಿದೆ ಎಂದು ಸಂಘವು ಪತ್ರದಲ್ಲಿ ಪ್ರತಿಪಾದಿಸಿತ್ತು.

ಬೆಂಗಳೂರು ಟೌನ್ ಹಾಲ್‌ ಸಂಘದ ಪತ್ರದಲ್ಲಿದ್ದ ಅಂಶಗಳನ್ನು ಉಲ್ಲೇಖಿಸಿ ಸ್ಪಷ್ಟೀಕರಣ ಕೇಳಿರುವ ರಾಜ್ಯಪಾಲರು, ಆ ಅಂಶಗಳಿಗೆ ವಿವರವಾದ ಸ್ಪಷ್ಟನೆಗಳ ಸಹಿತ ಕಡತವನ್ನು ಮತ್ತೊಮ್ಮೆ ಕಳುಹಿಸುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಚಲಿಸುತ್ತಿದ್ದ ಐಶಾರಾಮಿ ಕಾರಿನಲ್ಲೇ 'ದಮ್ ಮಾರೋ ದಮ್'; ಸಿಗರೇಟ್ ರಸ್ತೆಗೆಸೆದ Yuzvendra Chahal? Video Viral

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

SCROLL FOR NEXT