ಬೆಂಗಳೂರು/ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಡಾ ಹಗರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಇಂದು ದಿನೇಶ್ ಕುಮಾರ್ ಬೆಂಗಳೂರಿನ ಶಾಂತಿನಗರದಲ್ಲಿ ಇಡಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಇದೀಗ ಅವರನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರ ಮುಡಾ ಅಕ್ರಮ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆ ನಡೆಸಲು ಹಸಿರು ನಿಶಾನೆ ನೀಡಿತ್ತು.