ರಾಜ್ಯ

News headlines 16-09-2025 | ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಆಯ್ಕೆ ಅಸಿಂಧು; UKP-3 ಭೂಸ್ವಾಧೀನಕ್ಕೆ ಸರ್ಕಾರದಿಂದ ಪರಿಹಾರ ಮೊತ್ತ ನಿಗದಿ; ರಾಜ್ಯಪಾಲರಿಂದ ಮತ್ತೊಂದು ಮಸೂದೆ ಸರ್ಕಾರಕ್ಕೆ ವಾಪಸ್!

ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಆಯ್ಕೆ ಅಸಿಂಧು

ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಮರುಎಣಿಕೆಗೆ ಮಂಗಳವಾರ ಆದೇಶಿಸಿದೆ. ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಸುಮಾರು ಎರಡು ವರ್ಷಗಳ ವಿಚಾರಣೆಯ ನಂತರ, ನ್ಯಾಯಾಲಯವು ಮರುಎಣಿಕೆ ಮಾಡುವಂತೆ ಆದೇಶಿಸಿ, ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿದೆ.

UKP-3 ಭೂಸ್ವಾಧೀನಕ್ಕೆ ಸರ್ಕಾರದಿಂದ ಪರಿಹಾರ ಮೊತ್ತ ನಿಗದಿ

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಮಂಗಳವಾರ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ. ಮತ್ತು ಒಣ ಭೂಮಿಗೆ ಎಕರೆಗೆ 30 ಲಕ್ಷ ರೂ. ಪರಿಹಾರವನ್ನು ನೀಡಲು ನಿರ್ಧರಿಸಿದೆ. ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಯುಕೆಪಿ ಮೂರನೇ ಹಂತ ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ರಿಂದ 524 ಮೀಟರ್‌ಗೆ ಹೆಚ್ಚಿಸುವುದನ್ನು ಒಳಗೊಂಡಿದೆ. ಇದು ಶೇಖರಣಾ ಸಾಮರ್ಥ್ಯವನ್ನು 100 ಟಿಎಂಸಿ ಅಡಿ ಹೆಚ್ಚಿಸುತ್ತದೆ. ಇದಕ್ಕೆ 1.33 ಲಕ್ಷ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಗತ್ಯವಿದೆ. ಇದರಲ್ಲಿ ಮುಳುಗಡೆಯಾಗುವ 75,563 ಎಕರೆ ಭೂಮಿ ಸಹ ಸೇರಿದೆ. ವಿಶೇಷ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಲುವೆ ಕಾಮಗಾರಿಗೆ 51,000 ಎಕರೆಗೂ ಹೆಚ್ಚು ಭೂಮಿಯ ಅಗತ್ಯವಿದೆ ಮತ್ತು 23,000 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಕೆಲಸ ಪೂರ್ಣಗೊಂಡಿದೆ. ಇದಕ್ಕಾಗಿ ನೀರಾವರಿ ಭೂಮಿಗೆ 30 ಲಕ್ಷ ರೂ. ಮತ್ತು ಒಣ ಭೂಮಿಗೆ 25 ಲಕ್ಷ ರೂ. ಪರಿಹಾರವನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಪಾಲರಿಂದ ಮತ್ತೊಂದು ಮಸೂದೆ ಸರ್ಕಾರಕ್ಕೆ ವಾಪಸ್!

ಕೆರೆಗಳ ಸಂರಕ್ಷಿತ ಪ್ರದೇಶವನ್ನು ಕಡಿಮೆ ಮಾಡಲು ಅವಕಾಶ ಕಲ್ಪಿಸುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಸೂದೆಯನ್ನು ಸ್ಪಷ್ಟೀಕರಣ ಕೇಳಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ. ಕೆರೆಗಳು ಮತ್ತು ರಾಜಕಾಲುವೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಸಂರಕ್ಷಿತ ಪ್ರದೇಶ ವನ್ನು ನಿಗದಿಪಡಿಸಲು ಹಾಗೂ ಬಫರ್‌ಝೋನ್‌ನಲ್ಲಿ ಸಾರ್ವಜನಿಕ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಮಸೂದೆ ತಿದ್ದುಪಡಿಗೆ ಸರ್ಕಾರ ಮುಂದಾಗಿತ್ತು. ಆದರೆ, ಸರ್ಕಾರದ ಈ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ನಾಗರಿಕರ ಸಂಘವಾದ ಬೆಂಗಳೂರು ಟೌನ್ ಹಾಲ್‌, ರಾಜ್ಯಪಾಲರಿಗೆ ಪತ್ರ ಬರೆದು ಮಸೂದೆಗೆ ಅಂಕಿತ ಹಾಕದಂತೆ ಮನವಿ ಮಾಡಿತ್ತು.

ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ಭಾಗವಹಿಸದಿರಲು ASHA ಕಾರ್ಯಕರ್ತೆಯರ ನಿರ್ಧಾರ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ. ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಮೀಕ್ಷೆಯ ನಮೂನೆಯನ್ನು ವಿತರಿಸುವುದು, ಸಮೀಕ್ಷೆಯಲ್ಲಿರುವ 60 ಪ್ರಶ್ನೆಗಳಿಗೆ ಮಾಹಿತಿ ನೀಡಲು ಮುಂಚಿತವಾಗಿ ತಯಾರಿರುವಂತೆ ನೋಡಿಕೊಳ್ಳುವುದು, ವಿವರಗಳನ್ನು ಮೊಬೈಲ್ ಅಪ್ಲಿಕೇಶನ್ ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಆಶಾ ಕಾರ್ಯಕರ್ತೆಯರು ನಿಭಾಯಿಸಬೇಕಿದೆ.

ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ವಿರುದ್ಧ ಪ್ರತಿಭಟನೆ: ಬಿಡದಿಯಲ್ಲಿ ರೈತರ ಆತ್ಮಹತ್ಯೆ ಯತ್ನ

ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆ ವಿರುದ್ಧ ಬೆಂಗಳೂರಿನ ಹೊರವಲಯದಲ್ಲಿರುವ ಬಿಡದಿಯಲ್ಲಿ ಮಂಗಳವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಾಲ್ವರು ರೈತರು ವಿಷ ಸೇವಿಸಲು ಪ್ರಯತ್ನಿಸಿದರು. ಅವರನ್ನು ಇತರ ರೈತರು ತಡೆದರು. ರೈತರು ಕಳೆದ ಆರು ದಿನಗಳಿಂದ ಯೋಜನೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ನಾಯಕ ಆರ್ ಅಶೋಕ್ ಅವರಂತಹ ಅಶ್ವತ್ ನಾರಾಯಣ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ ಮತ್ತು ಅಂತಹ ಕಠಿಣ ನಿರ್ಧಾರ ತೆಗೆದುಕೊಳ್ಳದಂತೆ ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?

ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!

ಸು...ರ್ ಕುಮಾರ್: ಹಸ್ತ ಲಾಘವ ಕೊಡದ ಟೀಂ ಇಂಡಿಯಾ ನಾಯಕನಿಗೆ ಅವಹೇಳನಕಾರಿ ಶಬ್ದದಿಂದ ನಿಂದಿಸಿದ ಪಾಕ್ ಮಾಜಿ ಕ್ರಿಕೆಟಿಗ

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

SCROLL FOR NEXT