ವಿಜಯಪುರ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಪಿಸ್ತೂಲು, ಮಾರಕಾಸ್ತ್ರಗಳೊಂದಿಗೆ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ನಲ್ಲಿ 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ದರೋಡೆ ಮಾಡಿರುವ ಶಂಕೆ ವ್ಯಕ್ತವಾಗಿದೆ.