ಅಮಾನತು (ಸಾಂಕೇತಿಕ ಚಿತ್ರ) 
ರಾಜ್ಯ

ಲಂಚ ಸ್ವೀಕರಿಸಿದ ಆರೋಪ: ಮೂವರು ವೈದ್ಯರು ಅಮಾನತು

ಲಂಚ ಪಡೆದ ಆರೋಪದ ಕುರಿತು ತನಿಖೆ ನಡೆಸಿದ್ದ ಸಿಬಿಐ, ಈ ಮೂವರ ವಿರುದ್ಧ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ.

ಬೆಂಗಳೂರು: ವೈದ್ಯಕೀಯ ಸಂಸ್ಥೆಗೆ ಅನುಕೂಲಕರ ವರದಿಗಳನ್ನು ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇಲೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ಅಮಾನತುಗೊಂಡ ಮೂವರು ವೈದ್ಯರು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಎಂ.ಎಸ್‌. ಚೈತ್ರಾ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ.ಎನ್‌. ಮಂಜಪ್ಪ ಮತ್ತು ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ್ ಶೆಲ್ಕೆ ಅಮಾನತುಗೊಂಡವರು.

‌ಲಂಚ ಪಡೆದ ಆರೋಪದ ಕುರಿತು ತನಿಖೆ ನಡೆಸಿದ್ದ ಸಿಬಿಐ, ಈ ಮೂವರ ವಿರುದ್ಧ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ. ಈ ಕುರಿತು ಇಲಾಖೆಗೆ ಸಿಬಿಐ ಇ-ಮೇಲ್‌ ಮೂಲಕ ಮಾಹಿತಿ ನೀಡಿದೆ. ಹೀಗಾಗಿ ಮೂವರನ್ನೂ ಕರ್ತವ್ಯದಿಂದ ಅಮಾನತುಗೊಳಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮದ್‌ ಮೊಹಸಿನ್‌ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ..!

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ, ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!

ಉತ್ತಮ ಜನಪ್ರತಿನಿಧಿಗಳನ್ನು ತಯಾರು ಮಾಡಲು ಒಂದು ವರ್ಷದ ಕೋರ್ಸ್ ಆರಂಭಿಸಲು ಚಿಂತನೆ : ಸಭಾಧ್ಯಕ್ಷ ಯು.ಟಿ. ಖಾದರ್

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

SCROLL FOR NEXT