ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. 
ರಾಜ್ಯ

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ವಿರೋಧಿಸಿ ಆಹೋರಾತ್ರಿ ಧರಣಿ: ಕ್ರಿಮಿನಾಶಕ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ

ಭೂ‌ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.

ಬೆಂಗಳೂರು: ಬಿಡದಿ ಬಳಿ ಟೌನ್ ಶಿಪ್​​ಗೆ ಭೂ ಸ್ವಾಧೀನ ವಿರೋಧಿಸಿ ಕಳೆದ ನಾಲ್ಕು ದಿನಗಳಿಂದ ರೈತರು ಆಹೋರಾತ್ರಿ ಧರಣಿ ನಡೆಸುತ್ತಿರುವ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ ರೈತರು, ಮಂಗಳವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಭೂ‌ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಅಶ್ವತ್ಥ್ ನಾರಾಯಣ್ ಅವರು ಮಾತನಾಡುತ್ತಿದ್ದಾಗ ನಾಗೇಶ್ ಎಂಬ ರೈತ ಕೀಟನಾಶಕ ಸೇವಿಸಲು ಪ್ರಯತ್ನಿಸಿದರು, ಇನ್ನೊಬ್ಬ ವ್ಯಕ್ತಿ ಕೂಡ ಅದೇ ರೀತಿ ಮಾಡಲು ಪ್ರಯತ್ನಿಸಿದರು. ಈ ವೇಳೆ ಇಬ್ಬರನ್ನೂ ಇತರ ರೈತರು ಮತ್ತು ಪೊಲೀಸರು ತಡೆದರು. ತಕ್ಷಣ ಪ್ರತಿಭಟನಾ ಸ್ಥಳದ ಬಳಿ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ಗೆ ಇಬ್ಬರನ್ನೂ ಕರೆದೊಯ್ದರು.

ಭೂಸ್ವಾಧೀನ ಪ್ರಕ್ರಿಯೆ ಅಕ್ರಮ: ಆರ್.ಅಶೋಕ್

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಆರ್. ಅಶೋಕ್ ಅವರು, ಕಾಂಗ್ರೆಸ್ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದು, ಇದರಲ್ಲಿ 6,500 ಎಕರೆ ಕೃಷಿ ಭೂಮಿಯಾಗಿದೆ ಎಂದು ಹೇಳಿದ್ದಾರೆ.

ಇಲ್ಲಿ 10 ಲಕ್ಷಕ್ಕೂ ಹೆಚ್ಚು ತೆಂಗಿನ ಮರಗಳು ಮತ್ತು ಮಾವಿನ ಮರಗಳಿವೆ. ಪ್ರತಿದಿನ, ಈ ಪ್ರದೇಶದಿಂದ ಕೆಎಂಎಫ್‌ಗೆ 6 ಲಕ್ಷ ಲೀಟರ್ ಹಾಲು ಸರಬರಾಜು ಮಾಡಲಾಗುತ್ತದೆ. 3,000 ಕ್ಕೂ ಹೆಚ್ಚು ರೈತರು ಮತ್ತು ಕಾರ್ಮಿಕರು ಕೃಷಿಯನ್ನು ಅವಲಂಬಿಸಿದ್ದಾರೆ. ಇದರ ಹೊರತಾಗಿಯೂ, ಸರ್ಕಾರವು ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ನಿವೇಶನಗಳನ್ನು ಹಂಚಿಕೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ವಸತಿ ಮಂಡಳಿಯು ಈ ಹಿಂದೆ 560 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ನಿವೇಶನಗಳನ್ನು ಅಭಿವೃದ್ಧಿಪಡಿಸಿದೆ, ಆದರೆ, ಯಾವುದೇ ಮನೆಗಳನ್ನು ನಿರ್ಮಿಸಲಾಗಿಲ್ಲ. ಕೆಂಪೇಗೌಡ ಲೇಔಟ್ ಮತ್ತು ಶಿವರಾಮ ಕಾರಂತ್ ಲೇಔಟ್ ಇನ್ನೂ ಖಾಲಿಯಾಗಿಯೇ ಇವೆ. ಇಷ್ಟೊಂದು ಭೂಮಿ ಬಳಕೆಯಾಗದೆ ಉಳಿದಿರುವಾಗ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ರೈತರಿಗೆ ಮಾಡುತ್ತಿರುವ ದ್ರೋಹವಾಗಿದೆ. ಸರ್ಕಾರ ರಿಯಲ್ ಎಸ್ಟೇಟ್‌ನಿಂದ ಹಣ ಗಳಿಸಲು ಬಯಸುತ್ತಿದೆ. ಇದು ಕಾನೂನುಬಾಹಿರ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ತಾಯಿ ಬಗ್ಗೆ ಬಿಹಾರ ಕಾಂಗ್ರೆಸ್​​ ಪೋಸ್ಟ್​​; ವಿಡಿಯೋ ಡಿಲೀಟ್​​ ಮಾಡುವಂತೆ ಪಾಟ್ನಾ ಹೈಕೋರ್ಟ್ ಸೂಚನೆ

ಕಲ್ಯಾಣ ಕರ್ನಾಟಕ ನೀರಾವರಿಗೆ 70,000 ಕೋಟಿ ರೂ.ಗಳ ಅನುದಾನ: ಪ್ರತ್ಯೇಕ ಸಚಿವಾಲಯಕ್ಕೆ ಶೀಘ್ರವೇ ಅಧಿಸೂಚನೆ; ಸಿಎಂ ಸಿದ್ದರಾಮಯ್ಯ

ಹಣ ವರ್ಗಾವಣೆ, ಅಕ್ರಮ ನಿವೇಶನ ಹಂಚಿಕೆ ಆರೋಪ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ

ಚಳಿಗಾಲ ಆರಂಭಕ್ಕೂ ಮುನ್ನ ವಾಯು ಮಾಲಿನ್ಯ ಯೋಜನೆ ರೂಪಿಸಿ: CAQM, CPCBಗೆ ಸುಪ್ರೀಂ ಗಡುವು

ದಕ್ಷಿಣ ಕೊರಿಯಾಗೆ ಭಾರತದ ನೂತನ ರಾಯಭಾರಿಯಾಗಿ ಗೌರಂಗಲಾಲ್ ದಾಸ್ ನೇಮಕ

SCROLL FOR NEXT