ಬಾಲಕಿ ಸಾನ್ವಿ ಮತ್ತು ಆರೋಪಿ ರಾಧಾ 
ರಾಜ್ಯ

ಬೀದರ್: ಆಸ್ತಿಗಾಗಿ ಮನೆ ಮೇಲಿಂದ ಮಗುವನ್ನು ತಳ್ಳಿದ ಮಲತಾಯಿ; ಬಿದ್ದು ಒದ್ದಾಡಿ ಪ್ರಾಣ ಬಿಟ್ಟ ಬಾಲಕಿ!

ಆಗಸ್ಟ್​​ 27ರಂದು ಮಲತಾಯಿ ರಾಧಾ ಬಾಲಕಿಗೆ ಆಟವಾಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು.

ಬೀದರ್: ಮಲ ಮಗಳಿಗೂ ಆಸ್ತಿ ಹಂಚಿಕೆ ಆಗುತ್ತದೆ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ಮೂರು ಮಹಡಿ ಕಟ್ಟಡದ ಮೇಲಿಂದ ಬಾಲಕಿಯನ್ನು ತಳ್ಳಿ ಕೊಲೆ ಮಾಡಿದ ಘಟನೆ ನಗರದ ನ್ಯೂ ಆದರ್ಶ ಕಾಲನಿಯಲ್ಲಿ ಇತ್ತೀಚೆಗೆ ನಡೆದಿದೆ.

ಸಾನ್ವಿ (6) ಮೃತ ಬಾಲಕಿ. ಪ್ರಕರಣದಲ್ಲಿ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆಗಸ್ಟ್​​ 27ರಂದು ಮಲತಾಯಿ ರಾಧಾ ಬಾಲಕಿಗೆ ಆಟವಾಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಬಾಲಕಿಯು ಆಯತಪ್ಪಿ ಬಿದ್ದಿದ್ದಾಳೆ ಎಂದು ನಂಬಿದ್ದರು. ಈ ಬಗ್ಗೆ ಆಕಸ್ಮಿಕವಾಗಿ ಬಿದ್ದ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಂದೆ ಸಿದ್ಧಾಂತ ನೀಡಿದ ದೂರಿನ ಮೇರೆಗೆ ಗಾಂಧಿಗಂಜ್ ಪೊಲೀಸ್​ ಠಾಣೆಯಲ್ಲಿ ಯುಡಿಆರ್​ ಪ್ರಕರಣ ದಾಖಲಾಗಿತ್ತು.

ಕೆಲ ದಿನಗಳ ಬಳಿಕ ಸೆಪ್ಡಂಬರ್​ 13ರಂದು ಸಾರ್ವಜನಿಕರೊಬ್ಬರು ನಮಗೆ ಸಿಸಿಟಿವಿ ದೃಶ್ಯಗಳನ್ನು ತಂದು ಕೊಟ್ಟರು. ವಿಡಿಯೋ ಪರಿಶೀಲಿಸಿದಾಗ, ಬಾಲಕಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿಲ್ಲ. ಮೇಲ್ಮಹಡಿಯಲ್ಲಿ ಖುರ್ಚಿ ಇಟ್ಟು ಅದರ ಮೇಲೆ ಬುಟ್ಟಿ ಉಲ್ಟಾ ಇಟ್ಟು ಸಾನ್ವಿಯನ್ನ ಕೂರಿಸಿರೊದು ಪತ್ತೆಯಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಮೃತ ಬಾಲಕಿ ಅಜ್ಜಿ, ರಾಧಾ ವಿರುದ್ಧ ದೂರು ನೀಡಿದ್ದು, ಈ ದೂರು ದಾಖಲಿಸಿಕೊಂಡು ಪೊಲೀಸರು ಆರೋಪಿ ರಾಧಾಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.ತಾನು ಕೊಲೆ ಮಾಡಿರುವ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗುವಿನ ತಂದೆಗೆ ಆರೋಪಿ ಮಹಿಳೆಯು ಎರಡನೇ ಹೆಂಡತಿಯಾಗಿದ್ದಾಳೆ. ಆತನ ಮೊದಲ ಪತ್ನಿ 2019ರಲ್ಲಿ ಮೃತಪಟ್ಟಿದ್ದಾರೆ. ಬಳಿಕ 2023ರಲ್ಲಿ ಎರಡನೇ ಮದುವೆ ಮಾಡಿಕೊಂಡಿದ್ದಾರೆ. ಇವರಿಗೆ ಅವಳಿ ಮಕ್ಕಳಾಗಿದ್ದಾರೆ. ತನ್ನ ಮಕ್ಕಳಿಗೆ ಸಿಗಬೇಕಾದ ಆಸ್ತಿಯಲ್ಲಿ, ಈ ಮಲಮಗಳಿಗೂ ಕೂಡ ನೀಡಬೇಕಾಗುತ್ತದೆ. ಆಸ್ತಿ ಹಂಚಿಕೆಯಲ್ಲಿ ಈ ಬಾಲಕಿಯು ಅಡ್ಡಬರಬಾರದು, ತನ್ನ ಮಕ್ಕಳಿಗೇ ಎಲ್ಲಾ ಆಸ್ತಿ ಸಿಗಬೇಕೆಂದು ಈ ಕೊಲೆ ಮಾಡಿರುವುದಾಗಿ ಪೊಲೀಸ್​ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT