ಬಾನು ಮುಷ್ತಾಕ್ 
ರಾಜ್ಯ

ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ; ನಾಳೆ ವಿಚಾರಣೆ

ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆಗಾಗಿ ಅರ್ಜಿದಾರರ ಪರ ವಕೀಲ ಎಚ್ ಎಸ್ ಗೌರವ್ ಅವರು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ ಆರ್ ಗವಾಯಿ ಅವರ ಪೀಠದ ಮುಂದೆ ಮನವಿ ಮಾಡಿದರು.

ನವದೆಹಲಿ: ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಶುಕ್ರವಾರ ವಿಚಾರಣೆ ನಡೆಸಲು ಸರ್ವೋಚ್ಛ ನ್ಯಾಯಾಲಯ ಒಪ್ಪಿಕೊಂಡಿದೆ.

ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆಗಾಗಿ ಅರ್ಜಿದಾರರ ಪರ ವಕೀಲ ಎಚ್ ಎಸ್ ಗೌರವ್ ಅವರು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ ಆರ್ ಗವಾಯಿ ಅವರ ಪೀಠದ ಮುಂದೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್ ನಾಳೆ ಮೇಲ್ಮನವಿಯನ್ನು ಆಲಿಸಲು ಒಪ್ಪಿಕೊಂಡಿದೆ.

ಕರ್ನಾಟಕದಲ್ಲಿ ಸೆಪ್ಟೆಂಬರ್ 22 ರಂದು ಮೈಸೂರಿನ ಚಾಮುಂಡೇಶ್ವರಿ ಪೂಜೆ ಮಾಡಲು ಹಿಂದೂಯೇತರ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಗೌರವ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿಯಲ್ಲಿ, ಅರ್ಜಿದಾರರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಹಕ್ಕನ್ನು ಉಲ್ಲಂಘಿಸಲಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತಪ್ಪಾಗಿ ತೀರ್ಪು ನೀಡಿದೆ ಎಂದು ಹೇಳಿದ್ದಾರೆ.

ಮುಷ್ತಾಕ್ ಅವರು ಈ ಹಿಂದೆ "ಹಿಂದೂ ವಿರೋಧಿ" ಹೇಳಿಕೆಗಳನ್ನು ನೀಡಿರುವುದರಿಂದ ಅವರ ಭಾಗವಹಿಸುವಿಕೆಯು ಜನರ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲಟ್ ಪೇಪರ್ ಬಳಕೆ: ನಿಯಮ‌ ತಿದ್ದುಪಡಿಗೆ ಶುರುವಾಯ್ತು ಗೊಂದಲ, ಸುಗ್ರೀವಾಜ್ಞೆ ಅನುಮಾನ..!

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತಗಳ್ಳತನ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ: ಸಿದ್ದರಾಮಯ್ಯ

Telangana techie shot: ಅಮೆರಿಕದಲ್ಲಿ ರೂಮ್ ಮೇಟ್ ಜೊತೆಗೆ ಹೊಡೆದಾಟ; ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ!

ಬೆಂಗಳೂರಿಗೆ ಪ್ರಧಾನ ಮಂತ್ರಿಗಳ ಬಲಗೈ ಬಂಟ ಕೇಂದ್ರ ಸಚಿವ ಕುಮಾರಸ್ವಾಮಿ ಕೊಡುಗೆ ಏನು? DKS

ರಾಜ್ಯದ ಆರ್ಥಿಕತೆಗೆ ಆತಿಥ್ಯ ವಲಯ 25,000 ಕೋಟಿ ರೂ. ಕೊಡುಗೆ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

SCROLL FOR NEXT