ಅಪಘಾತಕ್ಕೀಡಾದ ಕಾರು 
ರಾಜ್ಯ

ಗದಗದಲ್ಲಿ ಭೀಕರ ಅಪಘಾತ: ಇಬ್ಬರು ಪೊಲೀಸ್​ ಕಾನ್ಸ್ಟೇಬಲ್​​​ ಸೇರಿ ಮೂವರು ಸ್ಥಳದಲ್ಲೇ ಸಾವು

ಅರ್ಜುನ್ ನೆಲ್ಲೂರ, ವೀರೇಶ್ ಉಪ್ಪಾರ ಮತ್ತು ರವಿ ನೆಲ್ಲೂರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿ‌ ಬಳಿಕ ಬಸ್​ಗೆ ಡಿಕ್ಕಿ ಹೊಡೆದಿದೆ.

ಗದಗ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾನ್ಸ್​ಟೇಬಲ್​ಗಳು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಪೊಲೀಸ್​ ಕಾನ್ಸ್ಟೇಬಲ್ ಗಳಾದ ಅರ್ಜುನ್ ನೆಲ್ಲೂರ(29ವ) ಮತ್ತು ವೀರೇಶ್ ಉಪ್ಪಾರ(31ವ) ಸೇರಿ ಅರ್ಜುನ್ ಚಿಕ್ಕಪ್ಪ ರವಿ ನೆಲ್ಲೂರ(43ವ) ಮೃತರಾಗಿದ್ದಾರೆ.

ಘಟನೆ ಹೇಗಾಯಿತು?

ಅರ್ಜುನ್ ನೆಲ್ಲೂರ, ವೀರೇಶ್ ಉಪ್ಪಾರ ಮತ್ತು ರವಿ ನೆಲ್ಲೂರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿ‌ ಬಳಿಕ ಬಸ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆಗೆ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿವೆ.

ಹಸೆಮಣೆ ಏರಬೇಕಿದ್ದವರು ದಾರುಣ ಅಂತ್ಯ

ಘಟನೆಯಲ್ಲಿ ಮೃತಪಟ್ಟ ಮೂವರ ಪೈಕಿ ಇಬ್ಬರು ಕಾನ್ಸ್​ಟೇಬಲ್​ಗಳ ವಿವಾಹ ನಿಶ್ಚಯವಾಗಿತ್ತು. ಅರ್ಜುನ ನೆಲ್ಲೂರ ಮತ್ತು ವೀರೇಶ್ ಉಪ್ಪಾರ ಹಸೆಮಣಿ ಏರುವವರಿದ್ದರು. ಇವರಿಬ್ಬರು ಪೊಲೀಸ್ ಇಲಾಖೆ ಸೇರಿ ಏಳು ವರ್ಷವಾಗಿತ್ತು.

ವೀರೇಶ್ ಉಪ್ಪಾರ ಕೊಪ್ಪಳ‌ ಜಿಲ್ಲಾ ಪೊಲೀಸ್​​​ ವೈರ್ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದರೆ, ಅರ್ಜುನ್ ನೆಲ್ಲೂರ ಹಾವೇರಿ ಜಿಲ್ಲಾ ಪೊಲೀಸ್ ವೈರ್ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ; ಹಲವೆಡೆ ವಾಹನ ಸಂಚಾರ ನಿರ್ಬಂಧ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

ನಮಗೆ ಶಕ್ತಿ ಇಲ್ಲ ಅದಕ್ಕೆ NDA ಜತೆ ಹೋಗಿದ್ದೀವಿ. ನೀವ್ಯಾಕೆ ಸ್ಟಾಲಿನ್‌ ಮನೆ ಬಾಗಿಲು ಬಡಿತೀರಾ?

P.Gಯಲ್ಲಿ LPG ಸಿಲಿಂಡರ್ ಸ್ಫೋಟ: ಓರ್ವ ಯುವಕ ಸಾವು, ಮೂವರಿಗೆ ಗಾಯ

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ- ಪಾಕ್ ಗೆ ಭಾರತದ ತಿರುಗೇಟು!

SCROLL FOR NEXT