ಡೆಲಿವರಿ ಬಾಯ್ ಮೇಲೆ ಹಲ್ಲೆ 
ರಾಜ್ಯ

ಆರ್ಡರ್ ತಡವಾಗಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ; Mubarak, Shahrukh ಬಂಧನ, Video

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಸ್ತುತ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಆನ್​​ಲೈನ್​ನಲ್ಲಿ ಆರ್ಡರ್ ಮಾಡಿದ್ದ ಆಹಾರ ತಡವಾಗಿ ಬಂದಿದ್ದಕ್ಕೆ ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಸ್ತುತ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮುಬಾರಕ್ ಹಾಗೂ ಶಾರೂಕ್ ಎಂದು ಗುರುತಿಸಲಾಗಿದ್ದು, ಹಲ್ಲೆಗೊಳಗಾದ ಚಾಂದ್ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಮೂಲಗಳ ಪ್ರಕಾರ ಸೆ.12ರಂದು ರಾತ್ರಿ ಬಾಪುಜಿ ನಗರದ ಬಳಿ ಆರೋಪಿಗಳು ಜ್ಯೊಮೊಟೊನಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು. ಮಳೆ ಹಿನ್ನೆಲೆಯಲ್ಲಿ ಡೆಲಿವರಿ ಬಾಯ್ ಚಾಂದ್ ತಡವಾಗಿ ಹೋಗಿದ್ದ. ಇದರಿಂದ ಕೆರಳಿದ ಆರೋಪಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ನೀರಿನ ಕ್ಯಾನ್​ನಿಂದ ಹೊಡೆದಿದ್ದರು.

ಘಟನೆಯ ವಿಡಿಯೋವನ್ನು ಸ್ಥಳೀಯರು ಮೊಬೈಲ್​​ನಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

News wrap 24-02-2026 | 2.7 ಲಕ್ಷ ಖಾಲಿ ಹುದ್ದೆ ಭರ್ತಿಗೆ ಆಗ್ರಹ; ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Shivamogga: 16 ವರ್ಷದ ಬಾಲಕನ ಕೊಲೆ; ರಣ್ವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ

SCROLL FOR NEXT