ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿವಿಯ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅತಿಥಿ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ವಿವಿಯ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಈ ಐವರು ಆರೋಪಿ ಉಪನ್ಯಾಸಕರು ವಿವಿಧ ಸಂದರ್ಭಗಳಲ್ಲಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಜ್ಞಾನಭಾರತಿ ಆವರಣದಲ್ಲೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರೇ ಕುಡಿದು ಬೇಕಾಬಿಟ್ಟಿ ವರ್ತಿಸಿದ, ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ.
ಅತಿಥಿ ಉಪನ್ಯಾಸಕ ರಾಮಾಂಜನೇಯ ಮದ್ಯ ಸೇವಿಸಿ ಬೆಂಗಳೂರು ವಿವಿ ಆವರಣದಲ್ಲಿ ಶರ್ಟ್ ಬಿಚ್ಚಿ ಡ್ಯಾನ್ಸ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿಯನ್ನ ಎತ್ತಿಕೊಂಡು ಡ್ಯಾನ್ಸ್ ಮಾಡಿರುವುದು ಮತ್ತು ಕಾರಿನಲ್ಲಿ ಕುಳಿತು ಮದ್ಯ ಸೇವಿಸಿರುವ ವಿಡಿಯೋಗಳು ವೈರಲ್ ಆಗಿವೆ.