ಸಿಎಂ ಸಿದ್ದರಾಮಯ್ಯ  
ರಾಜ್ಯ

ಸೆ. 22ರಿಂದ ಜಾತಿ ಗಣತಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರಕಾರ ಅಧಿಕೃತವಾಗಿ ಅನುಮೋದನೆ ನೀಡಿ ನಿನ್ನೆ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ.

ಬೆಂಗಳೂರು: ಹಲವು ಗೊಂದಲ, ವಿರೋಧಗಳ ನಡುವೆ ದಸರಾ ಹಬ್ಬದ ನಡುವೆ ಸೋಮವಾರ ಸೆ.22ರಿಂದ ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭವಾಗಲಿದೆ. ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, 16 ದಿನಗಳ ಕಾಲ ನಡೆಯುವ ಈ ಸಮೀಕ್ಷೆಗೆ ಸಾರ್ವಜನಿಕರ ಸಹಕಾರವನ್ನು ಕೋರಿದೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರಕಾರ ಅಧಿಕೃತವಾಗಿ ಅನುಮೋದನೆ ನೀಡಿ ನಿನ್ನೆ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ.

ಸಮೀಕ್ಷೆಯ ಉದ್ದೇಶ ಮತ್ತು ಸಿದ್ಧತೆ

ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವುದು ಈ ಸಮೀಕ್ಷೆಯ ಮುಖ್ಯ ಗುರಿಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಗಣಿಸಿ ಸರಕಾರವು ದಿನಾಂಕವನ್ನು ನಿಗದಿಪಡಿಸಿದೆ. ಈ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಈಗಾಗಲೇ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಿದ್ಧತೆಗಳನ್ನು ಆರಂಭಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮೀಕ್ಷೆಯ ಕುರಿತು ಮಾಹಿತಿ ನೀಡಲಾಗಿದೆ. ಸಮೀಕ್ಷಾ ಕಾರ್ಯದಲ್ಲಿ ತೊಡಗುವ ಗಣತಿದಾರರಿಗೆ ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಸಮೀಕ್ಷೆಯಲ್ಲಿ ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಮಾಡಲು ಮತ್ತು ಇದರ ಮಹತ್ವದ ಬಗ್ಗೆ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳುವಂತೆಯೂ ನಿರ್ದೇಶನ ನೀಡಲಾಗಿದೆ.

ಕಳೆದ ಗುರುವಾರ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಹಲವು ಸಚಿವರು ಜಾತಿ ಗಣತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ಸರಣಿ ಸಭೆಗಳನ್ನು ನಡೆಸಿದ್ದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಸಿಎಂ ಯಾವುದೇ ಕಾರಣಕ್ಕೂ ಜಾತಿ ಗಣತಿ ಮುಂದೂಡುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Caste Census: ಜಾತಿ ಗಣತಿ, ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್! ಕಾರಣವೇನು?

ಭಾರತಕ್ಕೆ ಅಮೆರಿಕದ ಮತ್ತೊಂದು ಹೊಡೆತ! H-1B ವೀಸಾಗಳ ಮೇಲೆ ವಾರ್ಷಿಕ 1 ಲಕ್ಷ ಡಾಲರ್ ಶುಲ್ಕ ವಿಧಿಸುವ ಘೋಷಣೆಗೆ ಟ್ರಂಪ್ ಸಹಿ!

ಜಮ್ಮು ಮತ್ತು ಕಾಶ್ಮೀರ; ಉಗ್ರರೊಂದಿಗೆ ಗುಂಡಿನ ಚಕಮಕಿ, ಯೋಧ ಹುತಾತ್ಮ; ಶೋಧ ಕಾರ್ಯಾಚರಣೆ ಪುನರಾರಂಭ

ಸೌದಿ - ಪಾಕಿಸ್ತಾನ ಒಪ್ಪಂದದ ಹಿನ್ನೋಟ: ಭಯ, ಆರ್ಥಿಕತೆ ಮತ್ತು ಮಹತ್ವಾಕಾಂಕ್ಷೆಗಳ ಆಟ (ಜಾಗತಿಕ ಜಗಲಿ)

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಜರು, ಹೇಳಿಕೆ ದಾಖಲು

SCROLL FOR NEXT