ಚಿಕ್ಕಮಗಳೂರು: ಪತ್ನಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಪತಿ ಸಾವನ್ನಪ್ಪಿರುವ ಘಟನೆ ಕೆಮ್ಮಣ್ಣು ಗುಂಡಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ವ್ಯೂವ್ ಪಾಯಿಂಟ್ನಲ್ಲಿ ಈ ದುರ್ಘಟನೆ ನಡೆದಿದೆ. ಮೃತನನ್ನು 40 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕರಾಗಿದ್ದ ಸಂತೋಷ್ ದಸರಾ ರಜೆ ಹಿನ್ನೆಲೆಯಲ್ಲಿ ಪತ್ನಿ ಶ್ವೇತ ಜೊತೆ ಚಿಕ್ಕಮಗಳೂರಿನ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿಗೆ ತೆರಳಿದ್ದರು. ಕೆಮ್ಮಣ್ಣುಗುಂಡಿ ವ್ಯೂವ್ ಪಾಯಿಂಟ್ ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಸಂತೋಷ್ ಮುಂದಾಗಿದ್ದರು. ಈ ವೇಳೆ ಕಾಲು ಜಾರಿ ನೂರಾರು ಅಡಿ ಆಳಕ್ಕೆ ಬಿದ್ದು ಸಂತೋಷ್ ಮೃತಪಟ್ಟಿದ್ದಾರೆ. ದಂಪತಿ ಕಳೆದ 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತ್ನಿ ಕಣೇದುರೆ ಸಂತೋಷ್ ಪ್ರಪಾತಕ್ಕೆ ಬಿದ್ದಿದ್ದು ಪತಿಯನ್ನು ಕಳೆದುಕೊಂಡ ಪತ್ನಿ ಶ್ವೇತ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹಗ್ಗದ ಮೂಲಕ ಪ್ರಪಾತದಿಂದ ಮೇಲಕ್ಕೆತ್ತಿದ್ದಾರೆ.