ಜಯಮೃತ್ಯುಂಜಯ ಸ್ವಾಮೀಜಿ 
ರಾಜ್ಯ

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ!

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ.

ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ‌ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.

ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದರು. ಇಂದು ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೇವು ಎಂದು ನೀಲಕಂಠ ಅಸೂಟಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video