ಬೆಂಗಳೂರು: ದಸರಾ ಹಬ್ಬದ ರಜೆಯ ಕಾರಣ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಮತ್ತು ಬೇರೆ ಊರುಗಳಿಗೆ ಸಂಚರಿಸುವ ಪ್ರಯಾಣಿಕರಿರುವುದರಿಂದ ಸೆ.26 ರಿಂದ ಕೆಎಸ್‌ಆರ್‌ಟಿಸಿ 2,300 ಹೆಚ್ಚುವರಿ ಬಸ್‌ಗಳ ಸೇವೆ ನೀಡುತ್ತಿದೆ.
ಸಾಲು ಸಾಲು ರಜೆ ಇರುವ ಕಾರಣ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯಗಳಿಗೆ ತೆರಳುವ ಅನುಕೂಲಕಕ್ಕಾಗಿ ಸೆ.26,27 ಮತ್ತು ಸೆ.30 ರಂದು ಕೆಎಸ್‌ಆರ್‌ಟಿಸಿ 2,300 ಹೆಚ್ಚುವರಿ ಬಸ್ ಸಂಚಾರ ನಡೆಸಲಿವೆ.
ಬೆಂಗಳೂರಿನ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆಗಿಳಿಯಲಿದೆ. ಈ ಹೆಚ್ಚುವರಿ ಬಸ್‌ಗಳು ವಿವಿಧ ನಗರಗಳಿಂದ ಬೆಂಗಳೂರಿಗೆ ಅ.2 ಹಾಗೂ 5 ರಂದು ಸೇವೆ ನೀಡಲಿದೆ.
ಮೈಸೂರು ದಸರಾ ವೀಕ್ಷಣೆ
ಮೈಸೂರು ದಸರಾ ವೀಕ್ಷಣೆಗೆ ತೆರಳುವವರಿಗೆ ಕೆಎಸ್ ಆರ್ ಟಿಸಿ 610 ವಿಶೇಷ ಸಾರಿಗೆ ವ್ಯವಸ್ಥೆ ಮತ್ತು ವಿಶೇಷ ಪ್ಯಾಕೇಜ್ ವ್ಯವಸ್ಥೆ ಮಾಡುತ್ತಿದೆ. ಅದರಲ್ಲಿ ಬೆಂಗಳೂರಿನ ಮೈಸೂರು ರಸ್ತೆ ಬಸ್‌ನಿಲ್ದಾಣದಿಂದ ಮೈಸೂರಿಗೆ 260 ಹೆಚ್ಚುವರಿ ಬಸ್‌ಗಳು ಸೇವೆ ನೀಡಲಿವೆ.
ಹಾಗೆಯೇ, ಮೈಸೂರು ಸುತ್ತಮುತ್ತ ಚಾಮುಂಡಿಬೆಟ್ಟ, ಕೆಆರ್‌ಎಸ್ ಅಣೆಕಟ್ಟು, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ ಹಾಗೂ ಗುಂಡ್ಲುಪೇಟೆ ಮತ್ತಿತರ ಸ್ಥಳಗಳಿಗೆ 350 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗಿಳಿಸಲಾಗುತ್ತಿದೆ ಎಂದು ಕೆಎಸ್ ಆರ್ ಟಿಸಿ ನಿಗಮ ತಿಳಿಸಿದೆ.