ಪ್ರಿಯಾಂಕ್ ಖರ್ಗೆ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ
ರಾಜ್ಯ

'ಗಬ್ಬರ್ ಸಿಂಗ್' ದರೋಡೆ ಪ್ರಮಾಣ ಕಡಿಮೆ ಮಾಡಿದ್ದಾನೆ, ಇದಕ್ಕಾಗಿ GST ಉಳಿತಾಯ ಉತ್ಸವ: ಪ್ರಿಯಾಂಕ್ ಖರ್ಗೆ

ಈಗ “GST ಉಳಿತಾಯ ಉತ್ಸವ“ ಮಾಡಬೇಕಂತೆ, ಕಳೆದ 8 ವರ್ಷದಿಂದ ”GST ಲೂಟಿ ಉತ್ಸವ” ಮಾಡುತ್ತಿದ್ದರಲ್ಲವೇ? ಜನರನ್ನು ಬಾವಿಗೆ ತಳ್ಳಿದ್ದು ಇವರೇ, ಈಗ ಬಾವಿಯಿಂದ ಮೇಲೇತ್ತಲು ಏಣಿ ಕೊಟ್ಟಿದ್ದೇವೆ ಎನ್ನುತ್ತಿರುವವರೂ ಇವರೇ.

ಬೆಂಗಳೂರು: ಗಬ್ಬರ್ ಸಿಂಗ್ ದರೋಡೆಯ ಪ್ರಮಾಣವನ್ನು ಕಡಿಮೆ ಮಾಡಿದ್ದಾನೆ, ಇದಕ್ಕಾಗಿ ಎಲ್ಲರೂ ಜಿಎಸ್ ಟಿ ಉಳಿತಾಯ ಉತ್ಸವ ಆಚರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಈ ಗಬ್ಬರ್ ಸಿಂಗ್ 8 ವರ್ಷ ಮಾಡಿದ ಪೂರ್ಣ ಪ್ರಮಾಣದ ಲೂಟಿಯನ್ನು ಎಲ್ಲರೂ ಮರೆತುಬಿಡಬೇಕು! ಕೇಂದ್ರ ಸರ್ಕಾರದ ವರಸೆ ಇದು! ಈ ದೇಶದ ಜನರನ್ನು ಹೇಗೆ ಬೇಕಾದರೂ ಮರಳು ಮಾಡಬಹುದಾದಷ್ಟು ಮೂರ್ಖರು ಎಂದು ಭ್ರಮಿಸಿದೆ ಬಿಜೆಪಿ. ಆದರೆ ಜನರು ಮೂರ್ಖರಲ್ಲ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಈಗ “GST ಉಳಿತಾಯ ಉತ್ಸವ“ ಮಾಡಬೇಕಂತೆ, ಕಳೆದ 8 ವರ್ಷದಿಂದ ”GST ಲೂಟಿ ಉತ್ಸವ” ಮಾಡುತ್ತಿದ್ದರಲ್ಲವೇ? ಜನರನ್ನು ಬಾವಿಗೆ ತಳ್ಳಿದ್ದು ಇವರೇ, ಈಗ ಬಾವಿಯಿಂದ ಮೇಲೇತ್ತಲು ಏಣಿ ಕೊಟ್ಟಿದ್ದೇವೆ ಎನ್ನುತ್ತಿರುವವರೂ ಇವರೇ. ಏಣಿ ಕೊಟ್ಟಿದ್ದಕ್ಕೆ ಕ್ರೆಡಿಟ್ ತೆಗೆದುಕೊಳ್ಳಲು ಹವಣಿಸುತ್ತಿದೆ, 8 ವರ್ಷದಿಂದ ಜನರನ್ನು ಬಾವಿಗೆ ತಳ್ಳಿದ್ದರ ಪಾಪದ ಹೊಣೆಯೂ ಮೋದಿಯವರದ್ದೇ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರು ಗಬ್ಬರ್ ಸಿಂಗ್ ಟ್ಯಾಕ್ಸ್ ಕಡಿತಗೊಳಿಸಬೇಕು ಎಂದು ಈ ಹಿಂದೆಯೇ ಹಲವು ಬಾರಿ ಆಗ್ರಹಿಸಿದ್ದಾಗ ಅವರ ಮಾತುಗಳನ್ನು ವ್ಯಂಗ್ಯ ಮಾಡಿದ್ದ ಬಿಜೆಪಿಯವರಿಗೆ ಈಗ ಜನಾಕ್ರೋಶಕ್ಕೆ ಬೆದರಿ GST ಕಡಿತಗೊಳಿಸಿದ್ದರ ಕ್ರೆಡಿಟ್ ತೆಗೆದುಕೊಳ್ಳಲು ನಾಚಿಕೆ ಎನಿಸುವುದಿಲ್ಲವೇ? ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ದುಬಾರಿ GST ಜಾರಿ ಮಾಡಿದಾಗಲೂ ಮಾಸ್ಟರ್ ಸ್ಟ್ರೋಕ್ ಅಂದರು, ಈಗ GST ಕಡಿತಗೊಳಿಸಿದ್ದನ್ನೂ ಮಾಸ್ಟರ್ ಸ್ಟ್ರೋಕ್ ಅನ್ನುತ್ತಿದ್ದಾರೆ! ಆದರೆ ಈ ಎಂಟು ವರ್ಷಗಳಲ್ಲಿ ಜನತೆಗೆ, ದೇಶದ ಆರ್ಥಿಕತೆಗೆ ಆಗಿರುವ ಹಾನಿಯನ್ನು ಭರಿಸುವವರು ಯಾರು? ಹಲವು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು GST ಪರಿಣಾಮದಿಂದ ಮುಚ್ಚಿಹೋಗಿದ್ದಕ್ಕೆ ಜವಾಬ್ದಾರಿ ಯಾರು? ದೇಶದ ಆರ್ಥಿಕತೆಗೆ ಬಿದ್ದ ಹೊಡೆತಕ್ಕೆ ಹೊಣೆ ಯಾರು? ಆಗಿರುವ ಉದ್ಯೋಗ ನಷ್ಟಕ್ಕೆ ಜವಾಬ್ದಾರಿ ಯಾರು? ಇದೆಲ್ಲವಕ್ಕೂ ಮೋದಿಯವರೇ ಹೊಣೆಯಲ್ಲವೇ? ಎಂದು ಸರಣಿ ಪ್ರಶ್ನೆ ಮುಂದಿಟ್ಟು ರಾಜ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾವ ಕ್ರಾಂತಿಯು ಇಲ್ಲ, ಕೇವಲ ''ಮಾಧ್ಯಮ ಸೃಷ್ಟಿ''; ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ

Delhi Blast: ವೈದ್ಯನಾದರೂ ತಲೆ ತುಂಬ 'ಇಸ್ಲಾಮ್ ಮೂಲಭೂತವಾದ' ತುಂಬಿಕೊಂಡಿದ್ದ ಬಾಂಬರ್! ರೋಗಿಗಳಿಗೆ ಏನು ಹೇಳ್ತಿದ್ದ ಗೊತ್ತಾ?

Delhi Blast: ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆ, 200 ವೈದ್ಯರು, ಸಿಬ್ಬಂದಿಗಳ ವಿಚಾರಣೆ

ಪಾಕ್ ಆಟಗಾರರೊಂದಿಗೆ 'ಹ್ಯಾಂಡ್ ಶೇಕ್ ಇಲ್ಲ' ನೀತಿಗೆ ತೀಲಾಂಜಲಿ: ಫ್ಯಾನ್ಸ್ ಗೆ ಅಚ್ಚರಿ ಮೂಡಿಸಿದ ಹರ್ಭಜನ್ ಸಿಂಗ್! Video

5th Generation Fighter: "ಭಾರತಕ್ಕೆ ಬೇಕಾದ್ದು ಕೊಡ್ತೇವೆ": ವಿಶ್ವದ ಯಾವುದೇ ರಾಷ್ಟ್ರ ಮಾಡದ 'ಸಾಹಸ' ಮಾಡಿದ ರಷ್ಯಾ!

SCROLL FOR NEXT