ಸಾಂದರ್ಭಿಕ ಚಿತ್ರ 
ರಾಜ್ಯ

ಕ್ಷುಲ್ಲಕ ವಿಚಾರಕ್ಕೆ ಜಗಳ: ಆಟೋ ಚಾಲಕನ ಹಿಂಬಾಲಿಸಿ ಕತ್ತು ಸೀಳಿ ಹತ್ಯೆಗೆ ಯತ್ನ

ಶಶಿಕುಮಾರ್ ಆಟೋ ಚಾಲಕರಾಗಿದ್ದು, ಅವರ ಪತ್ನಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಗುತ್ತಿಗೆ ಆಧಾರದಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಮಕ್ಕಳ ಜತೆ ತಿಪ್ಪೇನಹಳ್ಳಿಯಲ್ಲಿ ವಾಸವಾಗಿದ್ದಾರೆ.

ಬೆಂಗಳೂರು: ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ 'ಪಿತೃ ಪಕ್ಷ' ಪೂಜೆಗೆ ಹೋಗುತ್ತಿದ್ದ ಆಟೋ ಚಾಲಕ ಹಿಂಬಾಲಿಸಿ ಕತ್ತು ಸೀಳಿ ಹತ್ಯೆಗೆ ಯತ್ನಿಸಿರುವ ಘಟನೆಯೊಂದು ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ನಾಗಸಂದ್ರದ ಗಂಗೊಂಡನಹಳ್ಳಿ ಮುಖ್ಯ ರಸ್ತೆಯ ನಿವಾಸಿ ಆರ್. ಶಶಿ ಕುಮಾರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ಕೃತ್ಯ ಎಸಗಿದ ಶಿವು ಅಲಿಯಾಸ್ ಜನರೇಟರ್(26) ಎಂಬಾತನನನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶಶಿಕುಮಾರ್ ಆಟೋ ಚಾಲಕರಾಗಿದ್ದು, ಅವರ ಪತ್ನಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಗುತ್ತಿಗೆ ಆಧಾರದಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಮಕ್ಕಳ ಜತೆ ತಿಪ್ಪೇನಹಳ್ಳಿಯಲ್ಲಿ ವಾಸವಾಗಿದ್ದಾರೆ.

ಭಾನುವಾಪ ರಾತ್ರಿ ನೆಲಗೆದರನಹಳ್ಳಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ ಪಿತೃಪಕ್ಷದ ಪೂಜೆಗೆ ಶಶಿಕುಮಾರ್ ಅವರು ಬೈಕ್‌ನಲ್ಲಿ ಹೋಗುವಾಗ, ಮಾರ್ಗ ಮಧ್ಯೆ ಶಿವಪುರದ ವೈನ್ಸ್ ಸ್ಟೋರ್‌ನಲ್ಲಿ ಮದ್ಯ ಸೇವಿಸಲು ಹೋಗಿದ್ದಾರೆ. ಅದೇ ವೈನ್ಸ್ ಸ್ಟೋರ್‌ನಲ್ಲಿ ಆರೋಪಿಗಳಾದ ಭರತ್, ಶಿವು ಹಾಗೂ ಮತ್ತೊಬ್ಬ ಆರೋಪಿ ಮದ್ಯ ಸೇವಿಸುತ್ತಿದ್ದರು.

ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ಶಶಿಕುಮಾರ್ ಹಾಗೂ ಆರೋಪಿಗಳ ನಡುವೆ ಜಗಳವಾಗಿದೆ. ಬಳಿಕ ಸ್ಥಳೀಯರು ಜಗಳ ಬಿಡಿಸಿದ್ದಾರೆ. ನಂತರ ವೈನ್ಸ್ ಸ್ಟೋರ್‌ನಿಂದ ಹೊರಗೆ ಬಂದ ಶಶಿಕುಮಾರ್‌ಗೆ ಬಿಯರ್ ಬಾಯಟಲಿಯಿಂದ ಭರತ್ ತಲೆಗೆ ಹೊಡೆದಿದ್ದಾನೆ. ಬಳಿಕ ಮತ್ತೊಬ್ಬ ಆರೋಪಿ ಶಿವು, ಶಶಿಕುಮಾರ್ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಶಶಿಕುಮಾರ್ ಕುಸಿದು ಬಿದ್ದಿದ್ದಾರೆ. ಬಳಿಕ ಸ್ಥಳೀಯರು ಗೊರಗುಂಟೆಪಾಳ್ಯದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ಶಶಿಕುಮಾರ್‌ನನ್ನು ದಾಖಲಿಸಿದ್ದಾರೆ.

ಸದ್ಯ ಶಶಿಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಸಂಬಂಧ ಶಶಿಕುಮಾರ್ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತರೆ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್ 200 ರೂಪಾಯಿ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಸುಂಕಾಸ್ತ್ರ, H-1B ಶುಲ್ಕ ಹೆಚ್ಚಳ ವಿವಾದ: ಜೈಶಂಕರ್‌-ಮಾರ್ಕೊ ರುಬಿಯೊ ಭೇಟಿ ಬೆನ್ನಲ್ಲೇ ಭಾರತದ ಸಂಬಂಧ ನಿರ್ಣಾಯಕ ಎಂದ ಅಮೆರಿಕಾ

ಉಪರಾಷ್ಟ್ರಪತಿ ಕಚೇರಿಯಲ್ಲಿ ಧನ್ಕರ್ ನೇಮಿಸಿದ್ದ ಎಲ್ಲಾ ಸಿಬ್ಬಂದಿಗಳಿಗೆ ಗೇಟ್ ಪಾಸ್: ಹೊಸ ಸಿಬ್ಬಂದಿಗಳ ನೇಮಿಸಿದ VP Radhakrishnan!

"False Hindu God": ಅಮೆರಿಕದಲ್ಲಿ ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!

GST ಕಡಿತ, ಹಬ್ಬದ ಸೀಸನ್ ನಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಗಗನಕ್ಕೆ; ಎಂದಿಗಿಂತ ಶೇ.50 ರಷ್ಟು ಹೆಚ್ಚಳ!

SCROLL FOR NEXT