ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಮಗಳ ಮುಂದೆಯೇ ಪತ್ನಿಗೆ 11 ಬಾರಿ ಇರಿದು ಕೊಂದ ಪತಿ..!

ಶಿರಾ ತೊರೆದು ಬೆಂಗಳೂರಿಗೆ ಬಂದು ಲಿವಿಂಗ್ ಟುಗೆದರ್‌ನಲ್ಲಿ ಪ್ರೇಮಿಗಳು ನೆಲೆಸಿದ್ದರು ಟೆಲಿಕಾಲರ್‌ ಕಂಪನಿಯಲ್ಲಿ ರೇಖಾ ಕೆಲಸ ಮಾಡುತ್ತಿದ್ದಳು. ಮೂರು ತಿಂಗಳ ಹಿಂದೆ ಇಬ್ಬರೂ 2ನೇ ವಿವಾಹವಾಗಿದ್ದರು.

ಬೆಂಗಳೂರು: ಶೀಲ ಶಂಕಿಸಿ ತನ್ನ ಎರಡನೇ ಪತ್ನಿಗೆ 11ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬ ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ.

ಕೆಬ್ಬೆಹಳ್ಳದ ನಿವಾಸಿ ರೇಖಾ (32) ಕೊಲೆಯಾದ ದುರ್ದೈವಿ. ಹತ್ಯೆ ಬಳಿಕ ಮೃತಳ ಪ್ರಿಯಕರ ಲೋಹಿತಾಶ್ವ ಅಲಿಯಾಸ್ ಲೋಕೇಶ್ ಪರಾರಿಯಾಗಿದ್ದಾನೆ. ಆರೋಪಿ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ರೇಖಾ ಮೇಲೆ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ. ಆಕೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೊದಲ ಪತಿಯಿಂದ ಪ್ರತ್ಯೇಕವಾಗಿದ್ದ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ರೇಖಾ, ತನ್ನ ಮಕ್ಕಳ ಜತೆ ವಾಸವಾಗಿದ್ದರು. ಹಾಗೆಯೇ ತನ್ನ ಪತ್ನಿಯಿಂದ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಲೋಕೇಶ್ ಸಹ ದೂರವಾಗಿದ್ದ. ನಗರದಲ್ಲಿ ಇಬ್ಬರಿಗೂ ಸ್ನೇಹವಾಗಿದೆ. ಬಳಿಕ ಕಾಲ ಕ್ರಮೇಣ ಅದೂ ಪ್ರೇಮಕ್ಕೆ ತಿರುಗಿದೆ.

ಬಳಿಕ ಶಿರಾ ತೊರೆದು ಬೆಂಗಳೂರಿಗೆ ಬಂದು ಲಿವಿಂಗ್ ಟುಗೆದರ್‌ನಲ್ಲಿ ಪ್ರೇಮಿಗಳು ನೆಲೆಸಿದ್ದರು ಟೆಲಿಕಾಲರ್‌ ಕಂಪನಿಯಲ್ಲಿ ರೇಖಾ ಕೆಲಸ ಮಾಡುತ್ತಿದ್ದಳು. ಮೂರು ತಿಂಗಳ ಹಿಂದೆ ಇಬ್ಬರೂ 2ನೇ ವಿವಾಹವಾಗಿದ್ದರು. ಈ ಮದುವೆ ಬಳಿಕ ತನ್ನ ಇಬ್ಬರು ಮಕ್ಕಳ ಪೈಕಿ ಕಿರಿಯ ಮಗಳನ್ನು ತವರು ಮನೆಗೆ ಬಿಟ್ಟು ರೇಖಾ ಓದಿಸುತ್ತಿದ್ದಳು. ಇನ್ನು ಮದುವೆ ನಂತರ ತನ್ನ ಕಂಪನಿಯಲ್ಲಿ ಪತಿಗೆ ಕೂಡ ರೇಖಾ ಕೆಲಸ ಕೊಡಿಸಿದ್ದಳು.

ಇತ್ತೀಚೆಗೆ ತನ್ನ ಪತ್ನಿ ನಡವಳಿಕೆ ಮೇಲೆ ಲೋಕೇಶ್'ಗೆ ಅನುಮಾನ ಮೂಡಿ ಗಲಾಟೆ ಮಾಡುತ್ತಿದ್ದ. ಅಂತೆಯೇ ಸೋಮವಾರ ಸಹ ಇಬ್ಬರ ಮಧ್ಯೆ ಜಗಳವು ದುರಂತ ಅಂತ್ಯ ಕಂಡಿದೆ.

ಮನೆಯಲ್ಲಿ ಬೆಳಗ್ಗೆ ಜಗಳವಾಗಿದೆ. ಇದಾದ ಬಳಿಕ ಕೆಲಸಕ್ಕೆ ಹೋಗಲು ಸುಂಕದಕಟ್ಟೆ ಬಸ್ ನಿಲ್ದಾಣ ಬಳಿ ತನ್ನ ಹಿರಿಯ ಮಗಳ ಜೊತೆ ಬಸ್ಸಿಗೆ ಕಾಯುತ್ತ ರೇಖಾ ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೋಪಿ ರಗಳೆ ತೆಗೆದಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ರೇಖಾಳಿಗೆ ಮನಬಂದಂತೆ 11 ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಮೂರು ತಂಡಗಳನ್ನು ರಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್ 200 ರೂಪಾಯಿ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಸುಂಕಾಸ್ತ್ರ, H-1B ಶುಲ್ಕ ಹೆಚ್ಚಳ ವಿವಾದ: ಜೈಶಂಕರ್‌-ಮಾರ್ಕೊ ರುಬಿಯೊ ಭೇಟಿ ಬೆನ್ನಲ್ಲೇ ಭಾರತದ ಸಂಬಂಧ ನಿರ್ಣಾಯಕ ಎಂದ ಅಮೆರಿಕಾ

ಉಪ್ರಾಷ್ಟ್ರಪತಿ ಕಚೇರಿಯಲ್ಲಿ ಧನ್ಕರ್ ನೇಮಿಸಿದ್ದ ಎಲ್ಲಾ ಸಿಬ್ಬಂದಿಗಳಿಗೆ ಗೇಟ್ ಪಾಸ್: ಹೊಸ ಸಿಬ್ಬಂದಿಗಳ ನೇಮಿಸಿದ VP Radhakrishnan!

"False Hindu God": ಅಮೆರಿಕದಲ್ಲಿ ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!

GST ಕಡಿತ, ಹಬ್ಬದ ಸೀಸನ್ ನಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಗಗನಕ್ಕೆ; ಎಂದಿಗಿಂತ ಶೇ.50 ರಷ್ಟು ಹೆಚ್ಚಳ!

SCROLL FOR NEXT