ಅಶ್ಲೀಲ ವಿಡಿಯೋ (ಸಾಂದರ್ಭಿಕ ಚಿತ್ರ) 
ರಾಜ್ಯ

PT ಟೀಚರ್ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ; ಪ್ರಜ್ವಲ್ ರೇವಣ್ಣ ಕೇಸ್ ಅನ್ನೂ ಮೀರಿಸೋ Sex Scandal?

ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣವನ್ನೂ ಮೀರಿಸುವ Sex Scandal ವೊಂದು ಬೆಂಗಳೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ಶಾಲಾ ಸಿಬ್ಬಂದಿಯೊಬ್ಬರ ಬಳಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳಿವೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎಂಬಾತನ ವಿರುದ್ಧ ಮಹಿಳೆ ಆರೋಪಿಸಿದ್ದು, ಕೆಲವು ಮಹಿಳೆಯರು ಮತ್ತು ಯುವತಿಯರ ಜೊತೆಗಿರುವ ಖಾಸಗಿ ಕ್ಷಣವನ್ನು ಮ್ಯಾಥ್ಯೂ ಸೆರೆ ಹಿಡಿದುಕೊಂಡಿದ್ದಾನೆ.

ಆತನ ಬಳಿ ಸುಮಾರು 2500 ವಿಡಿಯೋಗಳಿವೆ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.

ಮೊಬೈಲ್ ನಲ್ಲಿ 2500 ವಿಡಿಯೋ

ಈ ಸಂಬಂಧ ಮ್ಯಾಥ್ಯೂ ವಿರುದ್ಧ ಸಂತ್ರಸ್ಥ ಮಹಿಳೆ ಮಹಿಳಾ ಆಯೋಗದ ಮೆಟ್ಟಿಲೇರಿದ್ದು, ದೂರು ನೀಡಿದ್ದಾರೆ ಎನ್ನಲಾಗಿದೆ. ದೂರಿನಲ್ಲಿ ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು, ಖಾಸಗಿ ಕ್ಷಣಗಳನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ಇದಲ್ಲದೇ, ಇತರ ಹಲವಾರು ಮಹಿಳೆಯರು ಮತ್ತು ಯುವತಿಯರ ಜೊತೆಗಿನ ಖಾಸಗಿ ಕ್ಷಣಗಳನ್ನು ಸಹ ಮ್ಯಾಥ್ಯೂ ಸೆರೆಹಿಡಿದುಕೊಂಡಿದ್ದು, ಒಟ್ಟು 2500 ವಿಡಿಯೋಗಳು ಆತನ ಬಳಿಯಿವೆ ಎಂದು ಆರೋಪಿಸಿದ್ದಾರೆ.

ಇನ್ನು ಸಂತ್ರಸ್ತೆಗೆ ಈಗಾಗಲೇ ಮದುವೆಯಾಗಿದ್ದು, ಒಂದು ಹೆಣ್ಣು ಮಗುವಿದೆ. ತನ್ನ ಪತಿಯಿಂದ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದಿರುವ ಈ ಮಹಿಳೆ, ತನ್ನ ಮಗಳು ಓದುತ್ತಿದ್ದ ಖಾಸಗಿ ಶಾಲೆಯಲ್ಲಿ ಮ್ಯಾಥ್ಯೂ ಪರಿಚಯವಾಗಿದೆ.

ಮ್ಯಾಥ್ಯೂ ಆ ಶಾಲೆಯಲ್ಲಿ ಕ್ರಿಕೆಟ್ ಕೋಚ್ ಮತ್ತು ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ಪರಿಚಯ ಬೆಳೆದು, ಬಳಿಕ ಜೊತೆಯಾಗಿ ವಾಸಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆಯಂತೆ ಇಬ್ಬರು ಚರ್ಚ್‌ನಲ್ಲಿ ಮದುವೆಯಾಗಿದ್ದಾರೆ. ಬಳಿಕ ದೈಹಿಕ ಸಂಪರ್ಕದ ಕ್ಷಣಗಳನ್ನು ಮ್ಯಾಥ್ಯೂ ರಹಸ್ಯವಾಗಿ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾದ ನಂತರ ಮ್ಯಾಥ್ಯೂ ನ ನಿಜವಾದ ಸ್ವರೂಪ ತಿಳಿಯಿತು ಎಂದು ಸಂತ್ರಸ್ತೆ ಹೇಳಿದ್ದಾಳೆ.

ರಾತ್ರೋರಾತ್ರಿ ಮ್ಯಾಥ್ಯೂ ಪರಾರಿ

ನಾವು ಕೆಲ ವರ್ಷಗಳ ಕಾಲ ಜೊತೆಯಾಗಿದ್ದೆವು. ಆದರೆ, ಒಂದು ರಾತ್ರಿ ನಾನು ಮಲಗಿದ್ದಾಗ ನನ್ನ ಮೊಬೈಲ್ ಸಮೇತ ಆತ ಓಡಿಹೋದ. ಆ ಮೊಬೈಲ್‌ನಲ್ಲಿ ಈತನ ಕೃತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಾಕ್ಷಿಗಳಿದ್ದವು ಎಂದು ಸಂತ್ರಸ್ತೆ ಹೇಳಿದ್ದಾಳೆ.

ಇನ್ನು ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ತೆಗೆದುಕೊಳ್ಳಲುತ್ತಿಲ್ಲ ಎಂದು ಸಂತ್ರಸ್ಥೆ ಅಳಲು ತೋಡಿಕೊಂಡಿದ್ದು, ಕೊನೆಗೆ ಮಹಿಳಾ ಆಯೋಗದ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬದಲಾಗುತ್ತಿರುವ ಭಾರತದ ಆರ್ಥಿಕ ಪಯಣಕ್ಕೆ ಹೊಸ ಕನ್ನಡಿ; ವಾಣಿಜ್ಯ ಪತ್ರಿಕೋದ್ಯಮಕ್ಕೆ The New Indian Express ಹೊಸ ಕೊಡುಗೆ, 'The Financial Standard' ಲೋಕಾರ್ಪಣೆ

'ಬರೀ ಮಾತು ಸಾಕು, ಒಪ್ಪಂದಕ್ಕೆ ಬನ್ನಿ; ಸವಾಲು ಹಾಕಿದರೆ ಸಮುದ್ರದ ತಳ ಸೇರುತ್ತೀರಿ': ಇರಾನ್ ಸಂಧಾನಕಾರರಿಗೆ ಟ್ರಂಪ್ ಎಚ್ಚರಿಕೆ, ಮಾತುಕತೆ ವಿಫಲವಾದರೆ ಮತ್ತೆ ದಾಳಿ..!

ಅಮೆರಿಕದಲ್ಲಿ ಬಂದೂಕು ಧಾರಿಗಳಿಂದ 2 ಪ್ರತ್ಯೇಕ ಗುಂಡಿನ ದಾಳಿ: ಓಹಿಯೋದಲ್ಲಿ ಮೂವರು ಬಲಿ, ಕ್ಯಾಲಿಫೋರ್ನಿಯಾದಲ್ಲಿ 9 ಜನರಿಗೆ ಗಾಯ..!

Asia Cup Rising Stars 2026: ಡಕೌಟ್ ಆದ ಹರ್ಷಿತ್ ರಾಣಾ ಕೆಣಕಿದ ಪಾಕ್ ಬೌಲರ್, ಮೈದಾನದಲ್ಲಿ ಮಾತಿನ ಚಕಮಕಿ, Video

ಶೂ, ಸಾಕ್ಸ್ ವಿತರಣೆ ವಿಳಂಬ: ಮನವಿ ಸಲ್ಲಿಸಲು ಬಂದವರ ಮೇಲೆ ಸಿಡಿಮಿಡಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಆಕ್ರೋಶ, ಕ್ಷಮೆಯಾಚನೆಗೆ ಆಗ್ರಹ..!