ಡಿ.ಕೆ ಶಿವಕುಮಾರ್ ಮತ್ತು ಚಲುವರಾಯಸ್ವಾಮಿ 
ರಾಜ್ಯ

KRS, Mysuru: 5 ದಿನ ‘ಕಾವೇರಿ ಆರತಿ’; ಸೆಪ್ಟೆಂಬರ್ 26ಕ್ಕೆ DCM ಡಿ.ಕೆ ಶಿವಕುಮಾರ್ ಉದ್ಘಾಟನೆ

ಸೆಪ್ಟೆಂಬರ್ 26ರಿಂದ ಸೆಪ್ಟೆಂಬರ್ 30ರವರೆಗೆ 5 ದಿನಗಳ ಕಾಲ ಕೆಆರ್​ಎಸ್​ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಂಡ್ಯ: ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಬೆನ್ನಲ್ಲೇ ಕೃಷ್ಣರಾಜ ಸಾಗರ(KRS) ಜಲಾಶಯದ ಬಳಿ ಕನ್ನಡ ನಾಡಿನ ಜೀವನದಿಗೆ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ 26ರಿಂದ ಸೆಪ್ಟೆಂಬರ್ 30ರವರೆಗೆ 5 ದಿನಗಳ ಕಾಲ ಕೆಆರ್​ಎಸ್​ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಂಗಳವಾರ ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 26 ರಂದು ಸಂಜೆ 5 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷರಾದ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿಶ್ಚಲಾನಂದನಾಥ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.

ಈ ಬಾರಿಯ ದಸರಾದಲ್ಲಿ ಸಾಂಕೇತಿಕವಾಗಿ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ತಾಯಿಗೆ ಆರತಿ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Karnataka Survey: ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ನಡುವೆಯೂ ಜಾತಿ 'ಸಮೀಕ್ಷೆ', ಗಣತಿದಾರರ ಪ್ರತಿಭಟನೆ!

'Ukraine war ನ ಪ್ರಾಥಮಿಕ ಹೂಡಿಕೆದಾರರು'.. ರಷ್ಯಾ ಇಂಧನ ಖರೀದಿ ಕೂಡಲೇ ನಿಲ್ಲಿಸಿ': ಭಾರತ, ಚೀನಾ ವಿರುದ್ಧ ಮತ್ತೆ Donald Trump ಕಿಡಿ!

PT ಟೀಚರ್ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ, Prajwal Revanna ಕೇಸ್ ಅನ್ನೂ ಮೀರಿಸೋ Sex Scandal?

Shreyas Iyer ದಿಢೀರ್‌ ರಾಜೀನಾಮೆ; BCCI ಗೆ ಪತ್ರ..! ಇಷ್ಟಕ್ಕೂ ಆಗಿದ್ದೇನು?

Bengaluru: 'ನನ್ ಗಂಡ ನಪುಂಸಕ.. 2 ಕೋಟಿ ರೂ ಕೊಡ್ಸಿ...'; ನವ ವಿವಾಹಿತೆ ಬೇಡಿಕೆ! ಆದ್ರೆ ಗಂಡನಿಂದಲೇ FIR

SCROLL FOR NEXT