ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್ ದರ 200 ರೂಪಾಯಿ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.

ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಒಂದು ಟಿಕೆಟ್​​ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ ತಡೆ ನೀಡಿದೆ.

ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.

ಪರಭಾಷಾ ಸಿನಿಮಾಗಳ ಹಾವಳಿ, ಮಿತಿ ಮೀರಿದ ಟಿಕೆಟ್ ದರದ ವಿರುದ್ಧ ಇಡೀ ಇಂಡಸ್ಟ್ರಿ ಏಕರೂಪ ಟಿಕೆಟ್ ದರ ನಿಗದಿ ಮಾಡಬೇಕು ಎಂದು ದಶಕಗಳಿಂದ ಹೋರಾಟ ನಡೆದಿತ್ತು. ಹತ್ತಾರು ಬಾರಿ ಈ ವಿಚಾರವಾಗಿ ಚರ್ಚೆ, ವಾದ- ಪ್ರತಿವಾದಗಳು ನಡೆದಿದ್ದವು‌. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಏಕರೂಪದ ಟಿಕೆಟ್ ದರ ನಿಗದಿ ಮಾಡುತ್ತು.

200 ರೂಪಾಯಿ ನಿಗದಿ ವಿರುದ್ಧ ವಿರೋಧ ಕೂಡ ವ್ಯಕ್ತವಾಗಿತ್ತು. ಬಿಗ್ ಬಜೆಟ್ ಸಿನಿಮಾಗಳಿಗೆ ಇದರಿಂದ ತೊಂದರೆ ಆಗಲಿದೆ ಎಂಬ ಚರ್ಚೆ ಶುರುವಾಯ್ತು. ಕೊನೆಗೆ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್​ನ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಪೀಠವು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಜೊತೆಗೆ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವಿಪ್ರೋ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಿ: ಅಜೀಂ ಪ್ರೇಮ್‌ಜಿಗೆ ಸಿಎಂ ಸಿದ್ದರಾಮಯ್ಯ ಪತ್ರ

Israel-Hamas War: ಹಮಾಸ್ ಬಂಡುಕೋರರಿಗೆ ಖಡಕ್ ಎಚ್ಚರಿಕೆ ನೀಡಿದ ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌! ಹೇಳಿದ್ದೇನು?

ಸುಂಕಾಸ್ತ್ರ, H-1B ಶುಲ್ಕ ಹೆಚ್ಚಳ ವಿವಾದ: ಜೈಶಂಕರ್‌-ಮಾರ್ಕೊ ರುಬಿಯೊ ಭೇಟಿ ಬೆನ್ನಲ್ಲೇ ಭಾರತದ ಸಂಬಂಧ ನಿರ್ಣಾಯಕ ಎಂದ ಅಮೆರಿಕಾ

"ವಿಕಸಿತ ಭಾರತಕ್ಕೆ ನ್ಯಾಯಾಂಗ ವ್ಯವಸ್ಥೆಯೇ ಅಡ್ಡಿ; ನ್ಯಾಯಾಧೀಶರಿಗೆ ತಿಂಗಳುಗಟ್ಟಲೆ ರಜೆ ಏಕೆ?"- ಪ್ರಧಾನಿ ಸಲಹೆಗಾರ Sanjeev Sanyal

ಕೋಲ್ಕತ್ತಾದಲ್ಲಿ ಭಾರಿ ಮಳೆ, ಪ್ರವಾಹ, ಜನಜೀವನ ಅಸ್ತವ್ಯಸ್ತ; ವಿದ್ಯುತ್ ಆಘಾತದಿಂದ 7 ಸಾವು

SCROLL FOR NEXT