ದಿನೇಶ್ ಗುಂಡೂರಾವ್  
ರಾಜ್ಯ

ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಬಿಂಬಿಸುವುದು ಬಿಜೆಪಿಯ ಏಕೈಕ ಅಜೆಂಡಾ!

ಹಿಂದೂ ಧರ್ಮದಲ್ಲಿ ಅನೇಕ ಜಾತಿಗಳಿವೆ. ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸರ್ಕಾರ ಯಾವುದೇ ಜಾತಿ ಸೃಷ್ಟಿಸುತ್ತಿಲ್ಲ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲಿದೆ, ರಾಜ್ಯ ಸರ್ಕಾರವಲ್ಲ. ಅದು ಬೇಡವೆಂದಾದರೆ ಬಿಜೆಪಿಯವರು ಕೂಡಲೇ ಪ್ರಧಾನಿಗೆ ಪತ್ರ ಬರೆಯಲಿ

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವುದು ಬಿಜೆಪಿಯ ಏಕೈಕ ಕಾರ್ಯಸೂಚಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಗೌಡ ಕ್ರಿಶ್ಚಿಯನ್ ಎಂಬುದನ್ನು ನಾವು ಸಮೀಕ್ಷೆಯಲ್ಲಿ ಸೇರಿಸಿದ್ದಲ್ಲ. ಇದಕ್ಕೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ. ಹಿಂದಿನ ಸಮೀಕ್ಷೆಯ ವೇಳೆ ಸುಮಾರು 1 ಲಕ್ಷ ಮಂದಿ ಈ ರೀತಿ ಹೇಳಿಕೊಂಡಿದ್ದರು. ಆ ವರದಿಯನ್ನು ಆರ್.ಅಶೋಕ್ ಸಚಿವರಾಗಿದ್ದಾಗ ಒಪ್ಪಿಕೊಂಡಿದ್ದರು ಎಂದರು.

ಹಿಂದೂ ಧರ್ಮದಲ್ಲಿ ಅನೇಕ ಜಾತಿಗಳಿವೆ. ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸರ್ಕಾರ ಯಾವುದೇ ಜಾತಿ ಸೃಷ್ಟಿಸುತ್ತಿಲ್ಲ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲಿದೆ, ರಾಜ್ಯ ಸರ್ಕಾರವಲ್ಲ. ಅದು ಬೇಡವೆಂದಾದರೆ ಬಿಜೆಪಿಯವರು ಕೂಡಲೇ ಪ್ರಧಾನಿಗೆ ಪತ್ರ ಬರೆಯಲಿ. ನಮ್ಮದು ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ ಎಂದರು.

ಸಮೀಕ್ಷೆ ವಿರೋಧಿಸುತ್ತಿರುವ ವಿಜಯೇಂದ್ರ ಅವರಿಗೆ ಎಷ್ಟು ಜ್ಞಾನವಿದೆಯೋ ಗೊತ್ತಿಲ್ಲ. ಮಾಹಿತಿ ಕೊರತೆ ಇರಬಹುದು, ಸರಿಯಾಗಿ ತಿಳಿದುಕೊಳ್ಳಲಿ. ಹಿಂದೆ ಕಾಂತರಾಜ ಆಯೋಗದ ಸಮೀಕ್ಷಾ ವರದಿಯನ್ನು ಇವರ ಸರ್ಕಾರವೇ ಒಪ್ಪಿಕೊಂಡು, ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಿ, ಅವರ ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳಲಿಲ್ಲವೇ ಎಂದು ಪ್ರಶ್ನಿಸಿದರು.

ಪ್ರಜಾಪ್ರಭುತ್ವದಲ್ಲಿ ಯಾವುದೇ ಕೆಲಸ ಮಾಡುವಾಗ ಪರ ವಿರೋಧ ಇದ್ದೇ ಇರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಪ್ರತೀ ಬಡವರಿಗೂ ಮೀಸಲಾತಿ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆ

'ತಮ್ಮದೇ ಜನರ ಮೇಲೆ ಬಾಂಬ್ ದಾಳಿ': ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ AIRSTRIKE ಕುರಿತು ಭಾರತ ವ್ಯಂಗ್ಯ

ಸೌದಿ-ಪಾಕಿಸ್ತಾನಗಳ ರಕ್ಷಣಾ ಒಪ್ಪಂದವು ಭಾರತಕ್ಕೆ ತಲೆನೋವಾ? (ತೆರೆದ ಕಿಟಕಿ)

ವಿಶ್ವಸಂಸ್ಥೆ ನಿರ್ಣಯಗಳ ಆಧಾರದ ಮೇಲೆ ಕಾಶ್ಮೀರ ಸಮಸ್ಯೆ ಪರಿಹರಿಸಬೇಕು: ಭಾರತದ ವಿರುದ್ಧ ಮತ್ತೆ ಕ್ಯಾತೆ ತೆಗೆದ ಟರ್ಕಿ ಅಧ್ಯಕ್ಷ..!

ಗಾಝಾ ಯುದ್ಧ ನಿಲ್ಲಿಸಿದ್ರೆ ಮಾತ್ರ ಟ್ರಂಪ್'ಗೆ ನೊಬೆಲ್ ಪ್ರಶಸ್ತಿ; ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

SCROLL FOR NEXT