ಸ್ವಾತಿ-ಸೂರ್ಯ 
ರಾಜ್ಯ

ಶಿವಮೊಗ್ಗ: ಓದು ಮುಗಿದ ಮೇಲೆ ಮದುವೆ ಅಂದಿದ್ದಕ್ಕೆ ಕಾಲುವೆಗೆ ತಳ್ಳಿ ಪ್ರೇಯಸಿಯನ್ನು ಕೊಂದ ಪ್ರಿಯಕರ!

ತಿರುಗಾಡಿಕೊಂಡು ಬರೋಣ ಅಂತ ಹೇಳಿ ಪ್ರೇಯಸಿ ಸ್ವಾತಿಯನ್ನು ಭದ್ರಾವತಿ ತಾಲೂಕಿನ ಯಕ್ಕಂದ ಗ್ರಾಮದ ಬಳಿ ಭದ್ರಾ ಕಾಲುವೆಯ ಹತ್ತಿರಕ್ಕೆ ಪ್ರಿಯಕರ ಸೂರ್ಯ ಕರೆದುಕೊಂಡು ಹೋಗಿದ್ದಾನೆ.

ಶಿವಮೊಗ್ಗ: ಮದುವೆಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನೇ ಕೊಂದಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ತಿರುಗಾಡಿಕೊಂಡು ಬರೋಣ ಅಂತ ಹೇಳಿ ಪ್ರೇಯಸಿ ಸ್ವಾತಿಯನ್ನು ಭದ್ರಾವತಿ ತಾಲೂಕಿನ ಯಕ್ಕಂದ ಗ್ರಾಮದ ಬಳಿ ಭದ್ರಾ ಕಾಲುವೆಯ ಹತ್ತಿರಕ್ಕೆ ಪ್ರಿಯಕರ ಸೂರ್ಯ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಮದುವೆ ವಿಚಾರ ಪ್ರಸ್ತಾಪವಾಗಿದೆ. ಇದಕ್ಕೆ ಸ್ವಾತಿ ಸದ್ಯಕ್ಕೆ ಮದುವೆ ಬೇಡ ಅಂತ ಹೇಳಿದ್ದಾಳೆ. ಇದರಿಂದ ಕೋಪಗೊಂಡ ಸೂರ್ಯ ಆಕೆಯನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಸೂರ್ಯ ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಸೂರ್ಯ, ಸ್ವಾತಿ ಇಬ್ಬರೂ ಕೂಡ ಪದವಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರ ನಡುವೆ ಪ್ರೀತಿ ಚಿಗುರೊಡೆದಿತ್ತು. ಆದರೆ ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಸ್ವಾತಿ ಸೂರ್ಯನಿಂದ ದೂರವಾಗಿದ್ದಳು. ಇದರಿಂದ ಕೋಪಗೊಂಡ ಸೂರ್ಯ ಈ ದುಷ್ಕೃತ್ಯ ಎಸಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಸೂರ್ಯ ಹಾಗೂ ಕೊಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಸೂರ್ಯನ ತಂದೆ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!