ಬೆಂಗಳೂರು: ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್‌ಎಲ್ ಭೈರಪ್ಪ (SL Bhyrappa) ವಿಧಿವಶರಾಗಿದ್ದಾರೆ. ಬೆಂಗಳೂರಿನ (Bengaluru) ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಇಂದು (ಸೆಪ್ಟೆಂಬರ್ 24) ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ.
ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ನಿವಾಸದಲ್ಲಿ ಎಸ್ಎಲ್ ಭೈರಪ್ಪ ಕುಟುಂಬ ವಾಸವಿತ್ತು. ಎಸ್ಎಲ್ ಭೈರಪ್ಪ ಅವರಿಗೆ ಪತ್ನಿ ಸರಸ್ವತಿ, ಪುತ್ರರಾದ ರವಿಶಂಕರ್ ಹಾಗೂ ಉದಯಶಂಕರ್ ಇದ್ದಾರೆ. ‘ಪುತ್ರ ರವಿಶಂಕರ್ ಲಂಡನ್‌ನಲ್ಲಿದ್ದು, ತಂದೆಯ ನಿಧನದ ಬೆನ್ನಲ್ಲೇ ಭಾರತಕ್ಕೆ ಆಗಮಿಸಿದ್ದಾರೆ.
ನಾಳೆ ಬೆಳಿಗ್ಗೆ 8 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಆ ಬಳಿಕ ಎಸ್ ಭೈರಪ್ಪ ಅವರ ಅಂತ್ಯಕ್ರಿಯೆ (SL Bhyrappa Funeral) ಶುಕ್ರವಾರ ಅಂದರೆ ಸೆಪ್ಟೆಂಬರ್ 26ರಂದು ಮೈಸೂರಿನ (Mysuru) ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಲಿದೆ.
ಸೆಪ್ಟೆಂಬರ್ 25 ಬೆಳಗ್ಗೆ 8ಗಂಟೆಗೆ ವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ. ಎಂಟು ಗಂಟೆ ನಂತರ ಆಸ್ಪತ್ರೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ತೀವ ಶರೀರವನ್ನು ಶಿಫ್ಟ್ ಮಾಡಿ ಸಾರ್ವಜನಿಕರ ಅಂತಿಮ ದರ್ಶನನ ವ್ಯವಸ್ಥೆ ಮಾಡಲಾಗುತ್ತದೆ.
ಸೆ.26 ರಂದು ಮಧ್ಯಾಹ್ನದ ನಂತರ ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬಳಿಕ ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.