ಹಿರಿಯ ಚೇತನ ಎಸ್ ಎಲ್ ಭೈರಪ್ಪನವರ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ದರಾಮಯ್ಯ ನಮನ 
ರಾಜ್ಯ

ಮೈಸೂರಿನಲ್ಲಿ SL ಭೈರಪ್ಪ ಸ್ಮಾರಕ ನಿರ್ಮಾಣ: ಅಂತಿಮ ದರ್ಶನ ಬಳಿಕ CM ಸಿದ್ದರಾಮಯ್ಯ ಘೋಷಣೆ; Video

ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಡಾ ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದು ಪಾರ್ಥಿವ ಶರೀರಕ್ಕೆ ನಮಿಸಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಸರಸ್ವತಿ ಸಮ್ಮಾನ್, ಪದ್ಮಭೂಷಣ ಡಾ ಎಸ್ ಎಲ್ ಭೈರಪ್ಪನವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಡಾ ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದು ಪಾರ್ಥಿವ ಶರೀರಕ್ಕೆ ನಮಿಸಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ

ಭೈರಪ್ಪ ಅವರು ಹೆಚ್ಚು ಸಮಯಗಳ ಕಾಲ ಮೈಸೂರಿನಲ್ಲಿಯೇ ಇದ್ದರು. ಮೈಸೂರು ಅವರ ನೆಚ್ಚಿನ ಸ್ಥಳ, ಹೀಗಾಗಿ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸಲಾಗುವುದು ಎಂದರು. ಇದಕ್ಕೂ ಮುನ್ನ ಭೈರಪ್ಪನವರ ಕುಟುಂಬಸ್ಥರೊಂದಿಗೆ ಕೆಲ ಹೊತ್ತು ಸಿಎಂ ಮಾತುಕತೆ ನಡೆಸಿದರು.

ಭೈರಪ್ಪನವರ ಕೆಲವು ಕೃತಿಗಳನ್ನು ನಾನು ಓದಿದ್ದೇನೆ. ನನ್ನ ನೆಚ್ಚಿನ ಬರಹಗಾರರು ಅವರು, ಅವರ ಕಾದಂಬರಿಗಳು ಹಲವು ಭಾಷೆಗಳಿಗೆ ಅನುವಾದಗೊಂಡಿವೆ. ಕನ್ನಡದ ಯಾವ ಸಾಹಿತಿಯ ಯಾವ ಕೃತಿಗಳೂ ಇಷ್ಟು ಭಾಷೆಗೆ ಅನುವಾದಗೊಂಡಿಲ್ಲ ಎಂದರು.

ಅವರಿಗೆ ಸರಸ್ವತಿ ಸಮ್ಮಾನ್, ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಬಂದಿದ್ದವು. ಜ್ಞಾನಪೀಠ ಪ್ರಶಸ್ತಿಯೂ ಅವರಿಗೆ ಬರಬೇಕಿತ್ತು, ಅದಕ್ಕೆ ಅವರು ಅರ್ಹರಾಗಿದ್ದರು ಎಂದು ಅಭಿಪ್ರಾಯಪಟ್ಟರು.

ಸಾಹಿತ್ಯ, ಚಿಂತನೆಯ ವಿಚಾರದಲ್ಲಿ ಭಿನ್ನಾಭಿಪ್ರಾಯವಿದ್ದರೂ ನಂಬಿದ್ದ ವಿಚಾರಕ್ಕೆ ಬದ್ಧರಾಗಿ ಬರೆದವರು ಭೈರಪ್ಪನವರು. ಆತ್ಮತೃಪ್ತಿಗೆ ಕಾದಂಬರಿ ಬರೆಯುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದರು. ಕಷ್ಟಪಟ್ಟು ಬದುಕಿನಲ್ಲಿ ಮೇಲೆ ಬಂದಿದ್ದರು. ಅನೇಕರು ಅವರಿಗೆ ಅಭಿಮಾನಿಗಳು, ಓದುಗರಾಗಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಹ ಭೈರಪ್ಪನವರ ಅಂತಿಮ ದರ್ಶನ ಪಡೆದರು. ಭೈರಪ್ಪ ಅವರು ಕನ್ನಡದ ಅದ್ವಿತೀಯ ಸಾಹಿತಿ. ಭಾರತ ಮಾತ್ರವಲ್ಲದೆ ಹೊರದೇಶದಲ್ಲಿಯೂ ಅವರು ಜನಪ್ರಿಯರು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ನಿರ್ಗಮಿಸಿದ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌, ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

Delhi Red Fort blast- UAPA ಕೇಸು ದಾಖಲು, ಇಬ್ಬರ ಬಂಧನ, ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ

ದೆಹಲಿ ಸ್ಫೋಟ: ಕಾರಿನ ಮಾಲೀಕನಿಗೆ ಫರಿದಾಬಾದ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ?

Delhi Red Fort Blast: ಸ್ಥಳಕ್ಕೆ NIA-NSG ಭೇಟಿ; ಸಮಗ್ರ ತನಿಖೆ ಆರಂಭ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾ

'ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ, ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ': ಇಶಾ ಡಿಯೋಲ್

SCROLL FOR NEXT