ಡಾ ಎಸ್ ಎಲ್ ಭೈರಪ್ಪ  
ರಾಜ್ಯ

Dr. SL Bhyrappa: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ; ಮಧ್ಯಾಹ್ನ ಮೈಸೂರಿಗೆ ಪಾರ್ಥಿವ ಶರೀರ ರವಾನೆ, ನಾಳೆ ಅಂತ್ಯಕ್ರಿಯೆ

ಇಂದು ಬೆಳಗ್ಗೆ 8 ಗಂಟೆಯ ನಂತರ ಬೆಂಗಳೂರು ಹಾಗೂ ಮೈಸೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭೈರಪ್ಪ ಅವರ ಅಭಿಮಾನಿಗಳು ಮತ್ತು ಸಾಹಿತ್ಯ ಪ್ರೇಮಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆಯಬೇಕೆಂದು ಅವರ ಕುಟುಂಬಸ್ಥರು, ಅವರ ಅನುಯಾಯಿಗಳು ಮನವಿ ಮಾಡಿದ್ದಾರೆ.

ಬೆಂಗಳೂರು: ನಾಡಿನ ಹಿರಿಯ ಧೀಮಂತ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ತಮ್ಮ 94ನೇ ವಯಸ್ಸಿನಲ್ಲಿ ನಿನ್ನೆ ಅಪರಾಹ್ನ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಾಳೆ ಬೆಳಗ್ಗೆ (ಸೆ,26)ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಇಂದು ಬೆಂಗಳೂರು, ಮೈಸೂರಿನಲ್ಲಿ ಸಾರ್ವಜನಿಕ ದರ್ಶನ

ಇಂದು ಲಂಡನ್ ನಿಂದ ಅವರ ಪುತ್ರ ರವಿಶಂಕರ್ ಆಗಮಿಸಿದ ನಂತರ ನಾಳೆ ಬ್ರಾಹ್ಮಣ ಸಂಪ್ರದಾಯ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ.

ಇಂದು ಬೆಳಗ್ಗೆ 8 ಗಂಟೆಯ ನಂತರ ಬೆಂಗಳೂರು ಹಾಗೂ ಮೈಸೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭೈರಪ್ಪ ಅವರ ಅಭಿಮಾನಿಗಳು ಮತ್ತು ಸಾಹಿತ್ಯ ಪ್ರೇಮಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆಯಬೇಕೆಂದು ಅವರ ಕುಟುಂಬಸ್ಥರು, ಅವರ ಅನುಯಾಯಿಗಳು ಮನವಿ ಮಾಡಿದ್ದಾರೆ. ಅಲ್ಲದೆ, ಇಂದು ಯಾರೂ ಆಸ್ಪತ್ರೆಗೆ ಬರಬಾರದು ಎಂದೂ ಕುಟುಂಬ ವಿನಂತಿಸಿದೆ.

ಮೈಸೂರಿನಲ್ಲಿಯೂ ಅಂತಿಮ ದರ್ಶನ

ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನ ಮುಗಿದ ಬಳಿಕ ಮಧ್ಯಾಹ್ನದ ತರುವಾಯ ಪಾರ್ಥಿವ ಶರೀರವನ್ನು ಗೌರವಪೂರ್ವಕವಾಗಿ ಮೈಸೂರಿಗೆ ಕೊಂಡೊಯ್ಯಲಾಗುವುದು. ಮೂಲತಃ ಮೈಸೂರಿನವರಾದ ಭೈರಪ್ಪನವರ ಅಂತಿಮ ದರ್ಶನಕ್ಕೆ ಅಲ್ಲಿಯೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ,

ನಾಳೆ ಅಂತ್ಯಕ್ರಿಯೆ

ಸೆ.26ರಂದು ಶುಕ್ರವಾರ ಬೆಳಗ್ಗೆ ಕುವೆಂಪುನಗರದಲ್ಲಿರುವ ಭೈರಪ್ಪ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗುತ್ತದೆ. ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಮೇರು ಕಾದಂಬರಿಕಾರ

ಎಸ್.ಎಲ್.ಭೈರಪ್ಪ ಅವರು 'ವಂಶವೃಕ್ಷ', 'ಪರ್ವ', 'ಸಾರ್ಥ' ಮತ್ತು 'ಅವರಣ' ಸೇರಿದಂತೆ ಇಪ್ಪತ್ತಾರು ಕಾದಂಬರಿಗಳನ್ನು ಬರೆದಿದ್ದಾರೆ. ಪ್ರಸ್ತುತ ಸಮಾಜ, ಇತಿಹಾಸ ಮತ್ತು ಮಾನವ ಸಂಬಂಧಗಳನ್ನು ವಿಮರ್ಶಾತ್ಮಕವಾಗಿ ನೋಡುವ ಅವರ ಬರಹಗಳು ಕನ್ನಡ ಓದುಗರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ನಿರ್ಗಮಿಸಿದ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌, ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

Delhi Red Fort blast- UAPA ಕೇಸು ದಾಖಲು, ಇಬ್ಬರ ಬಂಧನ, ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ

ದೆಹಲಿ ಸ್ಫೋಟ: ಕಾರಿನ ಮಾಲೀಕನಿಗೆ ಫರಿದಾಬಾದ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ?

Delhi Red Fort Blast: ಸ್ಥಳಕ್ಕೆ NIA-NSG ಭೇಟಿ; ಸಮಗ್ರ ತನಿಖೆ ಆರಂಭ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾ

'ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ, ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ': ಇಶಾ ಡಿಯೋಲ್

SCROLL FOR NEXT