ಶಾಸಕ ಟಿ.ಡಿ ರಾಜೇಗೌಡ 
ರಾಜ್ಯ

ಅಕ್ರಮ ಆಸ್ತಿ ಗಳಿಕೆ, ಭ್ರಷ್ಟಾಚಾರ ಆರೋಪ; ಮತ್ತೋರ್ವ ಕೈ ಶಾಸಕನ 'ಇಡೀ ಕುಟುಂಬದ' ವಿರುದ್ಧ FIR ದಾಖಲು!

ಈ ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್‌ದೇವ್ ಅವರನ್ನು ಎಫ್ ಐಆರ್ ನಲ್ಲಿ ಸೇರಿಸಲಾಗಿದೆ.

ಚಿಕ್ಕಮಗಳೂರು : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಜಿಲ್ಲೆಯ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಈ ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್‌ದೇವ್ ಅವರನ್ನು ಎಫ್ ಐಆರ್ ನಲ್ಲಿ ಸೇರಿಸಲಾಗಿದೆ.

ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರೆಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದಾರೆ. ಈ ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರಿನ ಮೇಲೆ ಗಂಭೀರ ಕ್ರಮ ಕೈಗೊಂಡಿತು. ತನಿಖೆಗೆ ಆದೇಶ ನೀಡಿ, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್‌ಪಿ) ಸೂಚನೆ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿತು. ಈ ಆದೇಶದಂತೆ ಲೋಕಾಯುಕ್ತ ಕಚೇರೆಯು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಸೆಪ್ಟೆಂಬರ್ 16ರಂದು ನ್ಯಾಯಾಲಯವು ಫೈನಲ್ ಆದೇಶ ನೀಡಿ, ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿತು.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಈ ಎಫ್‌ಐಆರ್‌ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 (ಅಧಿಕಾರಿಯಾಗಿ ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದಲ್ಲಿ ಜೈಶ್‍ನ 22 ವೈಟ್-ಕಾಲರ್ ಭಯೋತ್ಪಾದಕರು ಭಾಗಿ: ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ಎಚ್ಚರಿಕೆ

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಗಳಿಗೆ 613 ಕೋಟಿ ರೂ. ಬಾಡಿಗೆ; ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಹೀಗಿವೆ

ಬಾಗಲಕೋಟೆ: ಕಟ್ಟೆ ಹೊಡೆದ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು; 100ಕ್ಕೂ ಹೆಚ್ಚು ಟ್ರಾಲಿಗಳಿಗೆ ಬೆಂಕಿ, Video!

ಬೆಳಗಾವಿಯಲ್ಲಿ ನಕಲಿ ಕಾಲ್ ಸೆಂಟರ್ ಪತ್ತೆ; ಅಮೆರಿಕ ಪ್ರಜೆಗಳಿಗೆ ವಂಚಿಸಿದ 33 ಜನರ ಬಂಧನ

ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಅನುಮಾನಾಸ್ಪದ ಕಾರು ಪತ್ತೆ: ತನಿಖೆ

SCROLL FOR NEXT