ದರ್ಶನ್  
ರಾಜ್ಯ

25 * 3 ಜಾಗದ ಪ್ಯಾಸೇಜ್‌ನಲ್ಲಿ ವಾಕಿಂಗ್‌ ಮಾಡಲು ಹೇಳುತ್ತಾರೆ, ಅಲ್ಲಿ ಸ್ವಲ್ಪವೂ ಬೆಳಕು ಇಲ್ಲ: ನೋವು ತೋಡಿಕೊಂಡ ನಟ Darshan

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ಚಿತ್ರ ನಟ ದರ್ಶನ್‌ ಮತ್ತು ಪವಿತ್ರಾ ಗೌಡ ನಿನ್ನೆ ವಿಚಾರಣೆಗೆ ಹಾಜರಾಗಿದ್ದರು.

ಬೆಂಗಳೂರು: ನ್ಯಾಯಾಲಯದ ಆದೇಶದಲ್ಲಿ ತಿಳಿಸಿರುವ ಯಾವುದೇ ಮೂಲಭೂತ ಸೌಲಭ್ಯಗಳನ್ನೂ ಜೈಲಧಿಕಾರಿಗಳು ಕಲ್ಪಿಸಿಲ್ಲ. 25 ಅಡಿ ಉದ್ದ ಮತ್ತು 3 ಅಡಿ ಅಗಲದ ಪ್ಯಾಸೇಜ್‌ನಲ್ಲಿ ವಾಕಿಂಗ್‌ ಹೇಳಿದ್ದಾರೆ. ಈ ಜಾಗದಲ್ಲಿ ಒಂಚೂರೂ ಸೂರ್ಯನ ಬೆಳಕು ಬರುವುದಿಲ್ಲ ಎಂದು ಚಿತ್ರನಟ ದರ್ಶನ್ ತಮ್ಮ ಕಷ್ಟವನ್ನು ನಿನ್ನೆ ವಿಡಿಯೊ ಕಾನ್ಫರೆನ್ಸ್ ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ತೋಡಿಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ಚಿತ್ರ ನಟ ದರ್ಶನ್‌ ಮತ್ತು ಪವಿತ್ರಾ ಗೌಡ ನಿನ್ನೆ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗಾಗಿ ನಿನ್ನೆ ವಿಚಾರಣೆ ನಿಗದಿಪಡಿಸಲಾಗಿತ್ತು.

ಹಾಗೆಯೇ, ನ್ಯಾಯಾಲಯದ ಸೂಚನೆ ಹೊರತಾಗಿಯೂ ಹಾಸಿಗೆ, ದಿಂಬು, ಹೊದಿಕೆ ಸೇರಿ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸದ ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಶಿಫಾರಸು ಮಾಡುವಂತೆ ಕೋರಿ ದರ್ಶನ್‌ ಸಲ್ಲಿಸಿರುವ ಅರ್ಜಿಯೂ ಇದೇ ವೇಳೆ ವಿಚಾರಣೆಗೆ ನಿಗದಿಯಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ನಗರದ 57ನೇ ಸಿಟಿ ಸಿವಿಲ್‌ ಮತ್ತು ನ್ಯಾಯಾಲಯ ದರ್ಶನ್‌ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸಲು ನಿರ್ದೇಶಿಸಿ ಹೊರಡಿಸಿರುವ ತನ್ನ ಆದೇಶ ಪಾಲಿಸದ್ದಕ್ಕೆ ವಿವರಣೆ ನೀಡಲು ಸೆ.30ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಿತು.

ವಿಚಾರಣೆ ವೇಳೆ ದರ್ಶನ್ ಮತ್ತು ಆತನ ಪರ ವಕೀಲರು, ತಮಗೆ ಜೈಲಿನಲ್ಲಿ ನ್ಯಾಯಾಲಯದ ಆದೇಶದಂತೆ ಯಾವುದೇ ಸೌಲಭ್ಯ ಕಲ್ಪಿಸುತ್ತಿಲ್ಲ ಎಂದರು. ಆರೋಪಿಗಳಾದ ಜಗದೀಶ್‌ ಮತ್ತು ಅನುಕುಮಾರ್‌ ಅವರು, ತಮ್ಮನ್ನೂ ಈಗಲೂ ಕ್ವಾರಂಟೈನ್‌ ಸೆಲ್‌ನಲ್ಲಿ ಇಡಲಾಗಿದೆ ಎಂದು ತಿಳಿಸಿದರು.

ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಐವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 2025ರ ಅ.9ರವರೆಗೆ ವಿಸ್ತರಿಸಿ ಆದೇಶಿಸಿದ ನ್ಯಾಯಾಲಯ, ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!