ಅರವಿಂದ್ 
ರಾಜ್ಯ

ಬಳ್ಳಾರಿಯಲ್ಲಿ ಘೋರ ದುರಂತ: ಚರಂಡಿಗೆ ಬಿದ್ದು 4 ವರ್ಷದ ಬಾಲಕ ದಾರುಣ ಸಾವು

ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ.

ಬಳ್ಳಾರಿ: ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.

ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ಮೃತ ಬಾಲಕ. ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ.

ತಡರಾತ್ರಿ ಚರಂಡಿ ನೀರಿನಲ್ಲಿ ಬಾಲಕನ ಮೃತದೇಹ ತೇಲಿದೆ. ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನ ಜಿಂದಾಲ್ ಆಸ್ಪತ್ರೆಗೆ ಪೋಷಕರು ದಾಖಲಿಸಿದರು. ನೀರಿನಲ್ಲೇ ಮಗು ಮೃತಪಟ್ಟಿದ್ದ ಬಗ್ಗೆ ವೈದ್ಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಕೊನೇ ಕ್ಷಣದಲ್ಲಿ ಮಗು ಚರಂಡಿ ನೀರಿನಲ್ಲಿ ಬಿದ್ದು ಒದ್ದಾಡುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೂ ಮಗು ಸಾವಿಗೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ `ಅಕ್ಷರ ಮಾಂತ್ರಿಕ' ನ ಅಂತ್ಯಕ್ರಿಯೆ

'RJD ಯಾವತ್ತೂ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ': ಬಿಹಾರ ಮಹಿಳೆಯರಿಗೆ ಪ್ರಧಾನಿ ಮೋದಿ ಕರೆ

'ತುಂಬಾ ಕಷ್ಟ...'; West Indies ಟೆಸ್ಟ್ ಸರಣಿಯಿಂದ ಔಟ್, ಮೌನ ಮುರಿದ Karun Nair ಹೇಳಿದ್ದೇನು?

MiG-21 ಇನ್ನು ನೆನಪು ಮಾತ್ರ: ಚಂಡೀಗಢದಲ್ಲಿ ಭಾರತೀಯ ವಾಯುಪಡೆಯಿಂದ ವಿದಾಯ; Video

ಕೇಂದ್ರದ ಆರೋಪಗಳ ನಡುವೆ Sonam Wangchuk ಬೆಂಬಲಕ್ಕೆ ನಿಂತ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ

SCROLL FOR NEXT