ಗೃಹ ಜ್ಯೋತಿ ಯೋಜನೆ 
ರಾಜ್ಯ

ಜಾತಿಗಣತಿ ಸಮೀಕ್ಷೆಯಿಂದ ವಿದ್ಯುತ್ ಬಿಲ್ ಮೇಲೆ ಪರಿಣಾಮ ಬೀರುತ್ತಾ? BESCOM ಕೊಟ್ಟ ಸ್ಪಷ್ಟನೆ ಏನು?

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ (ಜಾತಿ ಗಣತಿಗೆ) ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದು, ಇದರಿಂದ ವಿದ್ಯುತ್ ಬಿಲ್ ಮೇಲೆ ಪರಿಣಾಮ ಬೀರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ (ಜಾತಿ ಗಣತಿಗೆ) ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದು, ಇದರಿಂದ ವಿದ್ಯುತ್ ಬಿಲ್ ಮೇಲೆ ಪರಿಣಾಮ ಬೀರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದರ ಬೆನ್ನಲ್ಲೇ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ಲಿಮಿಟೆಡ್ (ಬೆಸ್ಕಾಂ) ಗುರುವಾರ ಸ್ಪಷ್ಟನೆ ನೀಡಿದೆ.

ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದು, ಇದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್‌ನಲ್ಲಿ ವ್ಯತ್ಯಯವುಂಟಾಗಿದೆ. ಈ ಸಮಸ್ಯೆಯನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಹೇಳಿದೆ.

ಸೆಪ್ಟೆಂಬರ್‌ನಲ್ಲಿ ಮೀಟರ್ ರೀಡರ್‌ಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್‌ ರೀಡಿಂಗ್‌ ಅನ್ನು ಪ್ರೋಬ್‌ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್‌ ಬಿಲ್‌ ವಿತರಣೆಯ ದಿನಾಂಕವನ್ನು ಸೆ.15ನೇ ತಾರೀಕಿನಿಂದ 25ನೇ ತಾರೀಕಿನವರೆಗೆ ವಿಸ್ತರಿಸಲಾಗಿದೆ.

ಈ ಪ್ರಕ್ರಿಯೆಯಿಂದ ಕೆಲ ಪ್ರಕರಣಗಳಲ್ಲಿ ಗೃಹಜ್ಯೋತಿ ಗ್ರಾಹಕರಿಗೆ ಭಾಗಶಃ ಬಿಲ್‌ ಬಂದಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ. ಅವುಗಳನ್ನು ಕಳೆದ ತಿಂಗಳ ಸರಾಸರಿಯಂತೆ ಲೆಕ್ಕ ಹಾಕಿ, ಪರಿಷ್ಕೃತ ಬಿಲ್‌ ನೀಡಲಾಗುತ್ತದೆ. ಈ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ `ಅಕ್ಷರ ಮಾಂತ್ರಿಕ'ನ ಅಂತ್ಯಕ್ರಿಯೆ

MiG-21 ಇನ್ನು ನೆನಪು ಮಾತ್ರ: ಚಂಡೀಗಢದಲ್ಲಿ ಇಂದು ಭಾರತೀಯ ವಾಯುಪಡೆಯಿಂದ ವಿದಾಯ

ಲಡಾಕ್ ಲಡಾಯಿ: ಅ. 7 ರ ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ

ಉತ್ತರ ಪ್ರದೇಶ: ಎನ್ಕೌಂಟರ್ ನಂತರ ಶಿಕ್ಷಕಿ ಮುಖಕ್ಕೆ ಆಸಿಡ್ ಎರಚಿದ ವ್ಯಕ್ತಿಯ ಬಂಧನ

ರಸ್ತೆ ಗುಂಡಿಯಷ್ಟೇ ಅಲ್ಲ, ಸಿಲಿಕಾನ್ ಸಿಟಿ ಜನರ ಕಾಡುತ್ತಿದೆ ಬೀದಿ ದೀಪಗಳ ಸಮಸ್ಯೆ..!

SCROLL FOR NEXT